ಫಾಗಿಂಗ್ ಸಿಂಪರಣೆ ಮಾಡುವಂತೆ – ಬಿಜೆಪಿ ಮುಖಂಡರ ಆಗ್ರಹ.
ಮಾನ್ವಿ ಸ.07

ಪಟ್ಟಣದಲ್ಲಿ ಸೊಳ್ಳೆಗಳ ಕಾಟ ವಿಪರೀತವಾಗಿದ್ದು. ಜನರಂತು ಬೇಸತ್ತಿದ್ದರಿಂದ ಮಕ್ಕಳು ನಾನಾ ರೋಗಗಳಿಗೆ ತುತ್ತಾಗುವ ಪರಿಸ್ಥಿತಿ ಬಂದಿದೆ. ಹೀಗಾಗಿ ಫಾಗಿಂಗ್ ಸಿಂಪರಣೆ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಎಸ್ಸಿ ಮೋರ್ಚಾ ಪದಾಧಿಕಾರಿಗಳು ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಚರಂಡಿಗಳ ವಿಲೇವಾರಿ ಮಾಡದ ಕಾರಣ ದುರ್ನಾತ ಬೀರುತ್ತಿವೆ. ಸೊಳ್ಳೆಗಳ ಕಾಟ ವಿಪರೀತವಾಗಿದ್ದರಿಂದ ಜನರು ನಿದ್ರೆ ಮಾಡದಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಮಾನ್ವಿ ಪುರಸಭೆ ಮುಖ್ಯಾಧಿಕಾರಿ ಪರಶುರಾಮ ದೇವಮಾನೆ ಅವರು ಬಿಜೆಪಿ ಪಕ್ಷ ಆಗ್ರಹಿಸಿ ಮನವಿಯನ್ನು ಸ್ವೀಕರಿಸಿ ಎಲ್ಲಾ ವಾರ್ಡ್ಗಳಲ್ಲಿ ಸರ್ವೆ ಮಾಡುವ ಕಾರ್ಯ ಮಾಡಬೇಕು. ಒಂದು ವೇಳೆ ನಿರ್ಲಕ್ಷ್ಯ ತೋರಿದ್ದೇ ಆದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ