ಬ್ರಹ್ಮಾವರದಲ್ಲಿ ಪಾದಚಾರಿಗೆ ಬೊಲೆರೊ ವಾಹನ ಢಿಕ್ಕಿ – ಗಂಭೀರ ಸ್ವರೂಪದ ಗಾಯ.
ಬಾರ್ಕೂರು ಸ.09

ಬ್ರಹ್ಮಾವರದ ಹಂದಾಡಿ ಗ್ರಾಮದ ಬಾರ್ಕೂರು ರಸ್ತೆಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಬೊಲೆರೊ ವಾಹನ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗಳಾಗಿವೆ.
ಘಟನೆಯಲ್ಲಿ ಗಾಯ ಗೊಂಡ ವ್ಯಕ್ತಿ ವಿಜಯ ಎಂದು ತಿಳಿದು ಬಂದಿದೆ. ಎದುರಿನಿಂದ ವೇಗವಾಗಿ ಬಂದ ಬೊಲೆರೊ ವಾಹನ ವಿಜಯ ಅವರಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ವಿಜಯ ಅವರ ಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕ್ರಮ ಕೈಗೊಂಡಿದ್ದಾರೆ.
ವರದಿ:ಆರತಿ.ಗಿಳಿಯಾರು.ಉಡುಪಿ