ಬಾಲಭಾರತಿ ಶಾಲೆಯ ಮಕ್ಕಳು ತಾಲೂಕ – ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ.

ಆಲಮೇಲ ಸ.13

ಬಳಗಾನೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಬಾಲಭಾರತಿ ಶಾಲೆಯ ವಿದ್ಯಾರ್ಥಿಗಳು ತಾಲೂಕ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುತ್ತಾರೆ.ಈ ವೇಳೆ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರು ಎಸ್.ಆಯ್ ಜೋಗೂರ ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಸತತ ಪ್ರಯತ್ನದ ಫಲವಾಗಿ ಕ್ರೀಡಾ ಸ್ಫೂರ್ತಿ ಇಟ್ಟುಕೊಂಡು ಆಟ ಆಡಿದ್ದರಿಂದ ಓಟ, ಉದ್ದ ಜಿಗಿತ ಹಾಗೂ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುವುದು ಸಂತಸ ತಂದಿದೆ. ವಿದ್ಯಾರ್ಥಿಗಳು ಆಟ ಹಾಗೂ ಪಾಠಗಳನ್ನು ಸಮಾನವಾಗಿ ತೆಗೆದುಕೊಂಡು ಯಶಸ್ಸು ಸಾಧಿಸಬೇಕು ಎಂದು ಸಲಹೆ ನೀಡಿದರು .ಈ ವೇಳೆ ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ ಮಾತನಾಡಿ ಕ್ರೀಡಾ ಸ್ಫೂರ್ತಿಯಿಂದ ಆಟ ಆಡಿದ ವಿದ್ಯಾರ್ಥಿಗಳು ಹಾಗೂ ಸತತವಾಗಿ ತರಬೇತಿ ನೀಡಿದ ಕ್ರೀಡಾ ಶಿಕ್ಷಕಿಯರು ನಮ್ಮ ಶಾಲೆಯ ರತ್ನಗಳು ಇದ್ದಂತೆ. ನಿಮ್ಮ ಯಶಸ್ಸಿನಿಂದಾಗಿ ಶಾಲೆಯ ಕೀರ್ತಿಯೂ ತಾಲ್ಲೂಕಿನಲ್ಲಿಯೇ ಹೆಸರುವಾಸಿ ಯಾಗುವಂತೆ ಮಾಡಿರುವುದು ಸಂತಸ ತಂದಿದೆ.ಈ ವೇಳೆ ಶಿಕ್ಷಕರಾದ ಚಂದ್ರಕಾಂತ ದೇವರಮನಿ, ಲಕ್ಷ್ಮೀಬಾಯಿ ಹಳೇಮನಿ, ಸುವರ್ಣ ಸಾರಂಗಮಠ, ಸೀತಾ ಆರೇಶಂಕರ, ಸರುಬಾಯಿ ಬಂಡಗರ, ಸುನೀತಾ ಗುಂಡದ, ವೀಣಾ ರಾಂಪೂರಮಠ, ರಕ್ಷೀತಾ ಹಡಪದ ಮುಂತಾದವರು ಉಪಸ್ಥಿತರಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ರೇವಣಸಿದ್ದಯ್ಯ.ಜಿ.ಹಿರೇಮಠ.ಆಲಮೇಲ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button