ಕಾರ್ಮಿಕರ ಸಮಸ್ಯೆ ಆಲಿಸಲು ಸಚಿವ ಸಂತೋಷ್ ಲಾಡ್ ಉಡುಪಿಗೆ- ಇಂಟೆಕ್ಸ್ ಜಿಲ್ಲಾ ಅಧ್ಯಕ್ಷ ಕಿರಣ್ ಹೆಗ್ಡೆಯಿಂದ ಸ್ವಾಗತ ಮತ್ತು ಮನವಿ.
ಉಡುಪಿ ಸ.14

ರಾಜ್ಯದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಉಡುಪಿಗೆ ಆತ್ಮೀಯವಾಗಿ ಸ್ವಾಗತಿಸಿರುವ ಇಂಟೆಕ್ಸ್ ಜಿಲ್ಲಾ ಅಧ್ಯಕ್ಷರಾದ ಕಿರಣ್ ಹೆಗ್ಡೆ ಕಾರ್ಕಳ ಅವರು, ಕಾರ್ಮಿಕರ ಸಮಸ್ಯೆಗಳನ್ನು ಆಲಿಸಲು ವಿಶೇಷ ಸಭೆಯನ್ನು ಆಯೋಜಿಸಿದ್ದಾರೆ. ಈ ಸಭೆಯಲ್ಲಿ ಎಲ್ಲ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲುಗಳನ್ನು ನೇರವಾಗಿ ಸಚಿವರಿಗೆ ಸಲ್ಲಿಸುವಂತೆ ಅವರು ಕರೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡಿದ ಕಿರಣ್ ಹೆಗ್ಡೆ, ಅವರು, “ಸಚಿವ ಸಂತೋಷ್ ಲಾಡ್ ಅವರು ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸದಾ ಮುಂಚೂಣಿಯಲ್ಲಿದ್ದಾರೆ.
ಉಡುಪಿಯಲ್ಲಿ ನಡೆಯಲಿರುವ ಈ ಸಭೆಯು ಕಾರ್ಮಿಕರಿಗೆ ತಮ್ಮ ನೋವು, ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ನೇರವಾಗಿ ಸಚಿವರೊಂದಿಗೆ ಹಂಚಿಕೊಳ್ಳಲು ಒಂದು ಉತ್ತಮ ವೇದಿಕೆಯಾಗಿದೆ” ಎಂದು ತಿಳಿಸಿದ್ದಾರೆ. ಕಾರ್ಮಿಕ ಕಾಯ್ದೆಗಳು, ವೇತನ ಭತ್ಯೆಗಳು, ಕೆಲಸದ ವಾತಾವರಣ ಮತ್ತು ಇತರ ಪ್ರಮುಖ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಈ ಕಾರ್ಯಕ್ರಮವು ಕೇವಲ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಗೆ ಮಾತ್ರ ಸೀಮಿತವಾಗಿಲ್ಲ, ಬದಲಾಗಿ ಎಲ್ಲಾ ಕಾರ್ಮಿಕ ಪ್ರತಿನಿಧಿಗಳು ಮತ್ತು ಸಾರ್ವಜನಿಕರೂ ಸಹ ಇದರಲ್ಲಿ ಭಾಗವಹಿಸಬೇಕು ಎಂದು ಅವರು ಕೋರಿದರು. ಕಾರ್ಮಿಕರ ಹಿತಾಸಕ್ತಿಗಳನ್ನು ಕಾಪಾಡುವ ನಿಟ್ಟಿನಲ್ಲಿ ಈ ಸಭೆಯು ಒಂದು ಮಹತ್ವದ ಹೆಜ್ಜೆಯಾಗಲಿದೆ ಎಂದು ತಿಳಿಸಿದ್ದಾರೆ.
ಎಲ್ಲಾ ಕಾರ್ಮಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಿರಣ್ ಹೆಗ್ಡೆ ಮತ್ತೊಮ್ಮೆ ಮನವಿ ಮಾಡಿ ಕೊಂಡಿದ್ದಾರೆ.
ವರದಿ:ಆರತಿ.ಗಿಳಿಯಾರು.ಉಡುಪಿ