ಕಾರ್ಮಿಕರ ಸಮಸ್ಯೆ ಆಲಿಸಲು ಉಡುಪಿಗೆ ಸಚಿವ ಸಂತೋಷ್ ಲಾಡ್ – ಪ್ರದೀಪ್ ಪೂಜಾರಿ ಅವರಿಂದ ಸ್ವಾಗತ.
ಉಡುಪಿ ಸ.14

ರಾಜ್ಯದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಉಡುಪಿಗೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ವಿಶೇಷ ಸಭೆ ಆಯೋಜಿಸಲಾಗಿದೆ. ಉಡುಪಿ ಜಿಲ್ಲಾ ಇಂಟೆಕ್ಸ್ ಸಂಘಟನಾ ಕಾರ್ಯದರ್ಶಿ ಹಾಗೂ ಚಾಂತಾರ್ ಗ್ರಾಮ ಪಂಚಾಯತ್ ಸದಸ್ಯರಾದ ಪ್ರದೀಪ್ ಪೂಜಾರಿ (ದೀಪು ಚಾಂತಾರ್) ಅವರು, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಪ್ರದೀಪ್ ಪೂಜಾರಿ, “ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಲು ಸಚಿವ ಸಂತೋಷ್ ಲಾಡ್ ಅವರು ಯಾವಾಗಲೂ ಸಿದ್ಧರಿದ್ದಾರೆ. ಈ ಸಭೆಯು ಕಾರ್ಮಿಕರು ತಮ್ಮ ಕಷ್ಟ, ನೋವು, ಬೇಡಿಕೆಗಳನ್ನು ನೇರವಾಗಿ ಸಚಿವರ ಗಮನಕ್ಕೆ ತರಲು ಒಂದು ಉತ್ತಮ ಅವಕಾಶವಾಗಿದೆ” ಎಂದು ತಿಳಿಸಿದರು. ಕಾರ್ಮಿಕ ಕಾಯ್ದೆಗಳು, ವೇತನ, ಕೆಲಸದ ಪರಿಸರ ಮತ್ತು ಇತರ ಪ್ರಮುಖ ವಿಷಯಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ಈ ಕಾರ್ಯಕ್ರಮಕ್ಕೆ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು, ಪ್ರತಿನಿಧಿಗಳು ಮತ್ತು ಸಾರ್ವಜನಿಕರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ಕೋರಿದರು. ಈ ಸಭೆಯು ಕಾರ್ಮಿಕರ ಹಿತಾಸಕ್ತಿಗಳನ್ನು ಕಾಪಾಡುವ ದಿಕ್ಕಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ, ಎಲ್ಲ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರದೀಪ್ ಪೂಜಾರಿ ಅವರು ಮತ್ತೊಮ್ಮೆ ಮನವಿ ಮಾಡಿದ್ದಾರೆ.
ವರದಿ:ಆರತಿ.ಗಿಳಿಯಾರು.ಉಡುಪಿ