ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ದಿಂದ ತಾಲೂಕ – ಮಟ್ಟದ ಶಿಕ್ಷಕರ ದಿನಾಚರಣೆ.

ಮಾನ್ವಿ ಸ.14

ಪಟ್ಟಣದ ಶ್ರೀ ವೆಂಕಟೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲೂಕ ಘಟಕ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆದ ತಾ.ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರಿಗೆ ಮತ್ತು ಅತಿಥಿ ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲೂಕ ಘಟಕದ ಅಧ್ಯಕ್ಷರಾದ ಸಂಗಮೇಶ ಮುಧೋಳ ರ್ಶರೀ ಡಾ.ಸರ್ವಪಲ್ಲಿ ರಾಧಕೃಷ್ಣನ್ ಹಾಗೂ ಸಾವಿತ್ರಿಬಾಯಿ ಪುಲೆ ರವರ ಭಾವಚಿತ್ರಕ್ಕೆ ಪುಷ್ಪ ಸಮಿರ್ಪಿಸುವ ಮೂಲಕ ಚಾಲನೆ ನೀಡಿ ಮಾತನಾಡಿ ದೇಶದ ಮುಂದಿನ ಭವಿಷ್ಯವನ್ನು ರೂಪಿಸುವ ಮಕ್ಕಳಿಗೆ ಶಿಕ್ಷಣ ಸಂಸ್ಕಾರವನ್ನು ನೀಡುವ ಶಿಕ್ಷಕರನ್ನು ಗೌರವಿಸುವ ದಿನವಾದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ತಾಲೂಕಿನ ವಿವಿಧ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರಿಗೆ ಮತ್ತು ಅತಿಥಿ ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ಅಯೋಜಿಸುವ ಮೂಲಕ ಅವರಲ್ಲಿರುವ ಸೃಜನ ಶೀಲತೆ, ಪ್ರತಿಭೆಯನ್ನು ಹೊರಹೊಮ್ಮುವುದಕ್ಕೆ ಉತ್ತಮ ಅವಕಾಶವನ್ನು ಕಲ್ಪಿಸಲಾಗುವುದು ಎಂದು ತಿಳಿಸಿದರು.ತಾಲೂಕಿನ ವಿವಿಧ ಶಾಲೆಯ ಶಿಕ್ಷಕರಿಗಾಗಿ ದೇಶದ ಅಭಿವೃದ್ದಿಯಲ್ಲಿ ಕುಟುಂಬದ ಪಾತ್ರ ವಿಷಯದ ಕುರಿತು ಪ್ರಬಂದ ಸ್ಪರ್ಧೆ, ರಸಪ್ರಶ್ನೆ, ಸಂಗೀತ, ರಂಗೋಲಿ, ಚದುರಂಗ ಸ್ಪರ್ಧೆಗಳಲ್ಲಿ ನೂರಾರು ಶಿಕ್ಷಕರು ಭಾಗವಹಿಸಿದರು. ದೇವಿಕಾ ನಾಗರಾಜ್‌ಬಹುಮಾನಗಳ ಪ್ರಾಯೋಜಕತ್ವವನ್ನು ವಹಿಸಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ನಾಗಪ್ಪ , ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಶೋಕ್ , ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಬಸವರಾಜ್ ಜಂಗಮರಹಳ್ಳಿ , ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಮೌನೇಶ್, ಗೌರವಾಧ್ಯಕ್ಷ ಶಿವಗೇನಿ ನಾಯಕ್, ಉಪಾಧ್ಯಕ್ಷರಾದ ಕುಮಾರ್ , ನಿರ್ದೇಶಕರಾದ ವಿಜಯಕುಮಾರ್, ಚೌಡಯ್ಯ, ಗಿರಿಜಾ ವಸ್ತ್ರದ, ಸುಜಾತ, ಸುನಿತಾ , ಬಸನಗೌಡ , ಹನುಮಂತ್ ,ವಿರುಪಾಕ್ಷಯ್ಯ ವಂದಲಿ, ಬಸವರಾಜ್, ಮಂಜುನಾಥ, ಪ್ರಶಾಂತ್, ದತ್ತಪ್ಪ ಸೇರಿದಂತೆ ಇನ್ನಿತರರು ಇದ್ದರು.

ಬಾಕ್ಸ್ ನ್ಯೂಸ್:

ಪಟ್ಟಣದ ಶ್ರೀ ವೆಂಕಟೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲೂಕ ಘಟಕ ವತಿಯಿಂದ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button