ವಿದ್ಯಾರ್ಥಿ, ಯುವ ಜನರಲ್ಲಿ ನಾಯಕತ್ವ ಗುಣ ಬೆಳೆಸಲು ‘ನನ್ನ ಮತ ನನ್ನ ಹಕ್ಕು’ ಕಾರ್ಯಕ್ರಮ – ತಹಸೀಲ್ದಾರ ನಾಗರಾಜ್.ಕೆ

ರೋಣ ಸ 16

ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತದೆ . ವಿಶ್ವಸಂಸ್ಥೆಯ (UN) ಪ್ರಕಾರ, ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವು ಜಗತ್ತಿನಲ್ಲಿ ಪ್ರಜಾಪ್ರಭುತ್ವದ ಸ್ಥಿತಿಯನ್ನು ಪರಿಶೀಲಿಸಲು ಅವಕಾಶವನ್ನು ಒದಗಿಸುತ್ತದೆ. ವಿಶ್ವ ಪ್ರಜಾಪ್ರಭುತ್ವ ದಿನ ಎಂದೂ ಕರೆಯಲ್ಪಡುವ ಈ ದಿನವು ಪ್ರಜಾಪ್ರಭುತ್ವದ ಸರಿಯಾದ ಕಾರ್ಯನಿರ್ವಹಣೆಗೆ ಎಲ್ಲಾ ಸದಸ್ಯ ರಾಷ್ಟ್ರಗಳ ಭಾಗವಹಿಸುವಿಕೆಯ ಮಹತ್ವವನ್ನು ಎತ್ತಿ ತೋರಿಸುತ್ತದೆ. ಪ್ರಜಾಪ್ರಭುತ್ವ ಎಂದರೆ ಯಾವುದೇ ವರ್ಗ, ಗುಂಪು ಅಥವಾ ವ್ಯಕ್ತಿಯ ಅಧೀನದಲ್ಲಿಲ್ಲದೆ ಜನತೆಯ ಅಧೀನದಲ್ಲಿರುವ ಸರ್ಕಾರ (ಡೆಮಾಕ್ರಸಿ). ಪ್ರಜಾಪ್ರಭುತ್ವದ ವಿಚಾರ ಇಂದು ನಿನ್ನೆಯದಲ್ಲ. ಪ್ರಜಾಪ್ರಭುತ್ವ ಎಂಬ ಪದವನ್ನು ಹಲವಾರು ಅರ್ಥಗಳಲ್ಲಿ ಬಳಸಲಾಗುತ್ತದೆ. ಹಾಗೂ ಪ್ರಜಾ ಪ್ರಭುತ್ವವನ್ನು ಅಬ್ರಹಾಂ ಲಿಂಕನ್ ರವರು ಹೇಳಿರುವಂತೆ ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ರಚಿತವಾಗಿರುತ್ತದೆ ಎಂದು ಕಾರ್ಯಕ್ರಮದ ಘನಅಧ್ಯಕ್ಷತೆವಹಿಸಿದ ರೋಣ ತಾಲೂಕು ದಂಡಾಧಿಕಾರಿಗಳಾದ ತಹಸೀಲ್ದಾರ್ ನಾಗರಾಜ್, ಕೆ ರವರು ಮಾತನಾಡಿದರು.

ಸರಕಾರವೇ ಪ್ರಜಾಪ್ರಭುತ್ವ.ಪುರಾತನ ಕಾಲದಲ್ಲಿ ಗ್ರೀಕ್ ನಗರ ರಾಜ್ಯವಾದ ಆತೆನ್ಸ್‌ನಲ್ಲಿ ಪ್ರತ್ಯಕ್ಷ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿತ್ತು. ಅಲ್ಲದೆ, ಪ್ರಾಚೀನ ಭಾರತದಲ್ಲಿದ್ದ ಗಣರಾಜ್ಯಗಳ ಬಗ್ಗೆ ಸಾಕಷ್ಟು ಸಂಶೋಧನೆಯಾಗಿದೆ. ಇತರ ಕೆಲವು ದೇಶಗಳಲ್ಲೂ ಇಂಥ ಪ್ರಜಾಪ್ರಭುತ್ವವಿದ್ದುದನ್ನು ಕಾಣಬಹುದಾಗಿದೆ ಎಂದು ಸುದೀರ್ಘವಾಗಿ ಕಾರ್ಯಕ್ರಮ ಕುರಿತು ಉಪನ್ಯಾಸಕರಾದ ಯು, ಬಿ, ಬಸನಗೌಡ್ರರವರು ಮಾತನಾಡಿದರು.

ರೋಣನಗರದ ಶ್ರೀ ಶರಣಬಸವೇಶ್ವರ ಪದವಿ ಪೂರ್ವ ಹಾಗೂ ಕೆ ಎಸ್ ಎಸ್ ಪದವಿ ಮಹಾವಿದ್ಯಾಲಯದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ, ರೋಣ ತಾಲೂಕಿನ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ತುಂಬಾ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಈ ಕಾರ್ಯಕ್ರಮ ವನ್ನು ಪ್ರಾರಂಭದಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಯಾದ ಬಸಮ್ಮ ಇವರ ಪ್ರಾರ್ಥನೆಯೊಂದಿಗೆ ಆರಂಭಿಸಲಾಯಿತು.

ಇದೆ ಸಮಯದಲ್ಲಿ ಗೀತಾ ಆಲೂರ ಮೇಡಂ ರವರು ಸಮಾರಂಭದಲ್ಲಿ ಸಂವಿಧಾನ ಪೂರ್ವ ಪೀಠಿಕೆಯನ್ನು ಎಲ್ಲರಿಗೂ ಬೋಧಿಸಲಾಯಿತುಉಪನ್ಯಾಸಕರಾದ ಎಸ್.ವಿ ಸಂಕನಗೌಡ್ರ ರವರು ವಂದನೆಗಳನ್ನು ತಿಳಿಸಿದರು.

ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಸ್.ವಿ ಸಂಕನಗೌಡ್ರ.ರೋಣ.ಗದಗ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button