24 ರಂದು ನವರಾತ್ರಿ ಪ್ರಯುಕ್ತ – ವಿಶೇಷ ಸತ್ಸಂಗ ಕಾರ್ಯಕ್ರಮ.
ಚಳ್ಳಕೆರೆ ಸ.20





ತ್ಯಾಗರಾಜನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದಿಂದ “ನವರಾತ್ರಿ” ಯ ಪ್ರಯುಕ್ತ 24ರ ಬುಧವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ವಿಶೇಷ ಸತ್ಸಂಗ ಕಾರ್ಯಕ್ರಮವನ್ನು ಚಿತ್ರದುರ್ಗ ರಸ್ತೆಯ ಸುಕೋ ಬ್ಯಾಂಕ್ ಹಿಂಭಾಗ ದಲ್ಲಿರುವ ಲಯನ್ಸ್ ಕ್ಲಬ್ ನಲ್ಲಿ ಆಯೋಜಿಸಿದ್ದು.
ಶ್ರೀಗುರು ಬಸವ ಸಂಗೀತ ಶಾಲೆಯ ಮುಖ್ಯಸ್ಥರಾದ ಶಿವಯೋಗಿ ಮತ್ತು ತಂಡದವರಿಂದ ವಿಶೇಷ ಭಜನೆ, ಶ್ರೀಮತಿ ಜಿ.ಯಶೋಧಾ ಪ್ರಕಾಶ್ ನೇತೃತ್ವದಲ್ಲಿ ಸಾಮೂಹಿಕ ಶ್ರೀದೇವಿಸ್ತುತಿ ಪಾರಾಯಣ, ಶ್ರೀಶಾರದಾಶ್ರಮದ ಸದ್ಭಕ್ತರಿಂದ ದೇವಿ ಭಜನೆಗಳು ಹಾಗೂ ನಗರದ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ಅವರಿಂದ “ನವರಾತ್ರಿಯ ಮಹಿಮೆ” ಯ ಎಂಬ ವಿಷಯವಾಗಿ ಪ್ರವಚನ ಕಾರ್ಯಕ್ರಮಗಳು ನಡೆಯಲಿದ್ದು.
ಕಾರ್ಯಕ್ರಮದ ಕೊನೆಯಲ್ಲಿ ಅನ್ನ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ ಎಂದು ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಹೆಚ್.ಲಕ್ಷ್ಮೀದೇವಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.