ಅಕ್ಟೋಬರ್. 30 ರ ಕೊನೆಯ ದಿನ – ಸಿ.ಡಿ.ಪಿ.ಓ ಶಿವಮೂರ್ತಿ ಕುಂಬಾರ ಬುಲಾವ್.
ಮುದ್ದೇಬಿಹಾಳ ಸ.22





ಭಾಗ್ಯ ಲಕ್ಷ್ಮಿ ಯೋಜನೆಯಡಿಯಲ್ಲಿ ಬರುವ ಸನ್ 2006 – 2007 ನೇ. ಸಾಲಿನಲ್ಲಿ ಜನಿಸಿದ ಭಾಗ್ಯಲಕ್ಷ್ಮಿ ಫಲಾನುಭವಿಗಳಿಗೆ 18 ವರ್ಷ ಪೂರ್ಣ ಗೊಂಡಿದ್ದು. ಫಲಾನುಭವಿಗಳಿಗೆ ಪರಿಪಕ್ವ ಮೊತ್ತವನ್ನು ಪಡೆಯಲು ಅಕ್ಟೋಬರ್ 30 ಕೊನೆಯ ದಿನಾಂಕವನ್ನು ನಿಗದಿ ಪಡಿಸಲಾಗಿದೆ. ಅರ್ಹ ಫಲಾನುಭವಿಗಳು ಅಕ್ಟೋಬರ್ 30 ರ ಒಳಗೆ ದಾಖಲೆಗಳನ್ನು ಮುದ್ದೇಬಿಹಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಅವಧಿ ಮುಗಿದ ಮೇಲೆ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲಾ, ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಬಸವರಾಜ.ಸಂಕನಾಳ.ಮುದ್ದೇಬಿಹಾಳ