ಸೆ.27 ರಂದು ಖಾಸಗಿ ಕಾಲೇಜುಗಳಿಂದ ಶಿಕ್ಷಕರ – ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ.
ಮಾನ್ವಿ ಸ.24





ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ ಮಾನ್ವಿ ಹಾಗೂ ಖಾಸಗಿ ಕಾಲೇಜುಗಳ ಉಪನ್ಯಾಸಕರ ಸಂಘ ಮಾನ್ವಿ ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 27ರಂದು ನಗರದ ಗಾಂಧಿ ಕಾಲೇಜು ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ,ಉತ್ತಮ ಉಪನ್ಯಾಸಕ ಪ್ರಶಸ್ತಿ ಮತ್ತು ಅಕ್ಷರ ದಾಸೋಹಿ ಪ್ರಶಸ್ತಿ ಪ್ರಧಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟದ ತಾಲೂಕ ಅಧ್ಯಕ್ಷ ಪಿ.ತಿಪ್ಪಣ್ಣ ಬಾಗಲವಾಡ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶ ಮಾತನಾಡಿದ ಅವರು, ಮಾನ್ವಿ ಹಾಗೂ ಸಿರವಾರ ತಾಲೂಕಿನ ಖಾಸಗಿ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವವರನ್ನು ಉಪನ್ಯಾಸಕರನ್ನು ಗುರುತಿಸಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ಕಾರ್ಯಕ್ರಮದ ಮೂಲಕ ನಮ್ಮ ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳ ಕುರಿತು ಸರ್ಕಾರದ ಗಮನಕ್ಕೆ ತರಲು ಪ್ರಯತ್ನಿಸಲಾಗುವುದು. ಕಾರ್ಯಕ್ರಮದಲ್ಲಿ ಸಚಿವ ಎನ್ ಎಸ್ ಬೋಸರಾಜು, ಶಾಸಕ ಹಂಪಯ್ಯ ನಾಯಕ ಹಾಗೂ ಮಾಜಿ ಶಾಸಕರಗಳು, ಶಿಕ್ಷಣ ಪ್ರೇಮಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಖಾಸಗಿ ಕಾಲೇಜುಗಳ ಉಪನ್ಯಾಸಕ ಸಂಘದ ಅಧ್ಯಕ್ಷ ಆಂಜನೇಯ ನಸಲಾಪೂರ ಮಾತನಾಡಿ, ಅಕ್ಷರ ದಾಸೋಹಿ ಪ್ರಶಸ್ತಿಗೆ ನಗರದ ಲೋಯೋಲಾ ಕಾಲೇಜು ಮತ್ತು ಶಾರದಾ ಕಾಲೇಜುಗಳಿಂದ ತಲಾ ಇಬ್ಬರನ್ನು ಆಯ್ಕೆ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕೆ.ಈ ನರಸಿಂಹ, ಮೌನೇಶಗೌಡ.ಹೆಚ್, ಈರಣ್ಣ ಮರ್ಲಟ್ಟಿ, ಶರಣಬಸವ ಸೀಕಲ್, ಮಹಾಂತೇಶ ಓಲೇಕಾರ್, ವೀರಭದ್ರಯ್ಯ ಸ್ವಾಮಿ, ಮಹೇಬೂಬ್ ಮದ್ಲಾಪೂರ, ಕೃಷ್ಣಾವಧೂತ, ಹನುಮಂತ ಯಡಿವಾಳ, ಹನುಮಂತರಾಯ ಗಲಗ ಇದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ