ಗ್ಯಾರಂಟಿ ಯೋಜನೆಗಳ ಯಶಸ್ವಿ ಸಂದೇಶ ಮನೆ ಮನೆಗೆ: ಕುಂದಾಪುರ ಯುವ ಕಾಂಗ್ರೆಸ್‌ನ – ಅಭಿಯಾನಕ್ಕೆ ರಾಜ್ಯಾದ್ಯಂತ ಗಮನ.
ಕುಂದಾಪುರ ಸ.26





ಕುಂದಾಪುರ/ಬೆಂಗಳೂರು:ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಕುಂದಾಪುರ ವತಿಯಿಂದ ಹಮ್ಮಿಕೊಂಡಿರುವ “ಮನೆ ಮನೆಗೆ ಗ್ಯಾರಂಟಿ ಸ್ಟಿಕ್ಕರ್ ಅಭಿಯಾನ” ರಾಜ್ಯಾದ್ಯಂತ ಗಮನ ಸೆಳೆದಿದೆ. “ನುಡಿದಂತೆ ನಡೆದ ಸರ್ಕಾರದ ಜೊತೆ ನಮ್ಮ ಕುಟುಂಬ, ಬಡವರ ಪಾಲಿಗೆ ಬೆಳಕಾದ ಗ್ಯಾರಂಟಿ ಯೋಜನೆ” ಎಂಬ ಸಂದೇಶದೊಂದಿಗೆ ಈ ಅಭಿಯಾನವು ಸಾಮಾಜಿಕ ಜಾಲತಾಣಗಳಲ್ಲೂ ಹಾಗೂ ಸಾರ್ವಜನಿಕ ವಲಯಗಳಲ್ಲಿ ಬಾರಿ ಚರ್ಚೆಗೆ ಒಳಗಾಗಿದೆ.
ಈ ಮಹತ್ವದ ಅಭಿಯಾನಕ್ಕೆ ವಿಧಾನ ಪರಿಷತ್ ಸದಸ್ಯರಾದ ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರು “ಮಂಜುನಾಥ ಭಂಡಾರಿ (MLC) “ಅವರು ಚಾಲನೆ ನೀಡಿದರು.

ಯುವ ಕಾಂಗ್ರೆಸ್‌ನ ಈ ಸಮಾಜಮುಖಿ ಕಾರ್ಯಕ್ರಮಕ್ಕೆ ಸಾರ್ವಜನಿಕರ ಬೆಂಬಲವೂ ಕೂಡ ದೊರೆತಿದೆ.ಎಲ್ಲಾ ಗ್ಯಾರಂಟಿ ಯೋಜನೆಗಳ ಪ್ರಚಾರಕಾಂಗ್ರೆಸ್ ಸರ್ಕಾರವು ನೀಡಿದ ಗೃಹ ಜ್ಯೋತಿ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ, ಅನ್ನಭಾಗ್ಯ ಮುಂತಾದ ಜನಪರ ಕಾರ್ಯಕ್ರಮಗಳನ್ನು ಮನೆ ಮನೆಗಳಿಗೆ ತಲುಪಿಸುವ ಕಾರ್ಯವನ್ನು ಯುವ ಕಾಂಗ್ರೆಸ್ ಹಮ್ಮಿಕೊಂಡಿದೆ. ಯುವ ಕಾರ್ಯಕರ್ತರು ಪ್ರತಿ ಮನೆಗೆ ಭೇಟಿ ನೀಡಿ ಸರ್ಕಾರದ ಸಾಧನೆಗಳನ್ನು ವಿವರಿಸಿ, ಗ್ಯಾರಂಟಿ ಸ್ಟಿಕ್ಕರ್‌ಗಳನ್ನು ಅಂಟಿಸಿ, ಯೋಜನೆಗಳ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.
ಅಭಿಯಾನದ ಯಶಸ್ವಿ ಅನುಷ್ಠಾನದ ಸಂದರ್ಭದಲ್ಲಿಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್. ಮಹಮ್ಮದ್, ಮಂಗಳೂರು ಜಿಲ್ಲಾ ಕಾಂಗ್ರೆಸ್ ಮುಖಂಡ ಸುಭಾಷ್ ಶೆಟ್ಟಿ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶೆಟ್ಟಿ ಕಳಾವರ,
ಕುಂದಾಪುರ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಚ್ಛಿತ್ ಶೆಟ್ಟಿ, ಕುಂದಾಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಭಿಜಿತ್ ಪೂಜಾರಿ ಹೇರಿ ಕುದ್ರು, ಕೋಟ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ರವೀಂದ್ರ ನಾಯ್ಕ್, ಸುಮನ್ ಶೆಟ್ಟಿ ಆವರ್ಸೆ, ಹಾಗೂ ಇತರ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಈ ಯುವ ನಾಯಕರ ತಂಡದ ಪ್ರಯತ್ನಕ್ಕೆ ಸಾರ್ವಜನಿಕ ವಲಯದಲ್ಲಿ ದೊರೆಯುತ್ತಿರುವ ವ್ಯಾಪಕ ಬೆಂಬಲವು, ಸರ್ಕಾರದ ಜನಪರ ಕಾರ್ಯಕ್ರಮಗಳು ತಳಮಟ್ಟದ ಜನರನ್ನು ತಲುಪುವಲ್ಲಿ ಯಶಸ್ವಿ ಯಾಗಿರುವುದನ್ನು ಪುಷ್ಟೀಕರಿಸುತ್ತದೆ.
ವರದಿ:ಆರತಿ.ಗಿಳಿಯಾರು.ಉಡುಪಿ