ಹಾನಿ ಗೊಳಗಾದ ಜಮೀನುಗಳಿಗೆ ಭೇಟಿ ನೀಡಿದ – ಮಾಜಿ ಶಾಸಕ ರಾಜಾ.ವೆಂಕಟಪ್ಪ ನಾಯಕ.
ಮಾನ್ವಿ ಸ.29






ತಾಲೂಕಿನ ಹಿರೇಕೊಟ್ನೆಕಲ್, ಪೋತ್ನಾಳ್, ಜೇನೂರು, ತಡಕಲ್ ಸೇರಿದಂತೆ ಹಲವು ಗ್ರಾಮಗಳಲ್ಲಿ ಅತಿವೃಷ್ಟಿಯಿಂದ ಹತ್ತಿ ಮತ್ತು ಜೋಳದ ಬೆಳೆಗಳಿಗೆ ಭಾರೀ ಹಾನಿ ಸಂಭವಿಸಿದೆ. ಹಾನಿಗೊಳಗಾದ ಜಮೀನುಗಳಿಗೆ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಭೇಟಿ ನೀಡಿ, ರೈತರ ದುಸ್ಥಿತಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ರೈತರು ಯಾವುದೇ ಕಾರಣಕ್ಕೂ ಭಯ ಪಡುವ ಅಗತ್ಯವಿಲ್ಲ. ನಾನು ಸದಾ ನಿಮ್ಮೊಂದಿಗಿದ್ದೇನೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ನಾನು ಆಗ್ರಹಿಸುತ್ತೇನೆ” ಎಂದು ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಈರಣ್ಣ ಮರ್ಲಟ್ಟಿ, ರಾಜ್ಯ ಯುವ ಘಟಕದ ಉಪಾಧ್ಯಕ್ಷ ರಾಜಾ ರಾಮಚಂದ್ರ ನಾಯಕ, ರೈತ ಘಟಕದ ಅಧ್ಯಕ್ಷ ಶರಣಪ್ಪ ಗೌಡ ಮದ್ಲಾಪೂರ, ತಾಲೂಕು ವಕ್ತಾರ ನಾಗರಾಜ್ ಬೋಗಾವತಿ, ನಗರ ಜೆಡಿಎಸ್ ಅಧ್ಯಕ್ಷ ಹೆಜ್.ಮೌನೇಶ್ ಗೌಡ, ತಾಲೂಕು ಹಿಂದುಳಿದ ವರ್ಗದ ಅಧ್ಯಕ್ಷ ಲಕ್ಷ್ಮಣ ಯಾದವ್, ಎಸ್.ಟಿ ಘಟಕದ ಅಧ್ಯಕ್ಷ ವಿಜಯ್ ನಾಯಕ, ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು ಮತ್ತು ರೈತರು ಪಾಲ್ಗೊಂಡಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ