ಜ್ಞಾನಯೋಗಿ ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ – ವಿದ್ಯಾರ್ಥಿಗಳ ಕ್ರೀಡಾ ಸಾಧನೆ.
ಜಾಲಿಹಾಳ ಸ.30





ಬಾದಾಮಿ ತಾಲೂಕಿನ ಜಾಲಿಹಾಳ ಗ್ರಾಮದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಶ್ರೀ ಜ್ಞಾನಯೋಗಿ ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ್ದಾರೆ.ಇತ್ತೀಚೆಗೆ ಬಾದಾಮಿಯ ಆಡಗಲ್ ನಲ್ಲಿ ನಡೆದ ಕ್ರೀಡಾಕೂಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಕಾರ್ತಿಕ ಬಳಗಾನೂರ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ ಇನ್ನೊರ್ವ ವಿದ್ಯಾರ್ಥಿನಿಯಾದ ಸಿಮ್ರಾನ ಹುಸೇನಸಾಬ ಕದಡಿ ಉದ್ದ ಜಿಗಿತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿದ್ದಾಳೆ. ಈ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಸರ್ವ ಸದಸ್ಯರು, ಮುಖ್ಯೋಪಾಧ್ಯಾಯರು, ಗುರು ಮಾತೆಯರು ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಸ್.ವಿ ಸಂಕನಗೌಡ್ರ ರೋಣ ಗದಗ