ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಭ್ರಷ್ಟಾಚಾರ ವಿರೋಧಿ – ಒಕ್ಕೂಟದಿಂದ ಪ್ರತಿಭಟನೆ.
ಮಾನ್ವಿ ಅ.03





ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರೀಯ ಕಾರ್ಮಿಕರ ಮಾನವ ಹಕ್ಕುಗಳ ಭ್ರಷ್ಟಾಚಾರ ವಿರೋಧಿ ಒಕ್ಕೂಟದ ಪದಾಧಿಕಾರಿಗಳು ಮಾನ್ವಿ ಪಟ್ಟಣದ ಶಾಸಕರ ಭವನದ ಮುಂದೆ ಪ್ರತಿಭಟನೆ ನಡೆಸಿದರು.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕ ಪಂಚಾಯತಿ ಇ.ಓ ಖಾಲಿದ್ ಅಹ್ಮದ್, ಪರಿಶಿಷ್ಟ ಪಂಗಡ ಇಲಾಖೆಯ ತಾಲೂಕ ಅಧಿಕಾರಿ ಮಹಾಲಿಂಗಪ್ಪ ಇಂಗಳದಾಳ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಾಲೂಕ ಅಧಿಕಾರಿ ಮನ್ಸೂರ್ ಅಹ್ಮದ್ ಸೇರಿದಂತೆ ಮಾನ್ವಿ ಆಹಾರ ಇಲಾಖೆ ನಿರೀಕ್ಷಕ ದೇವರಾಜರನ್ನ ಅಮಾನತು ಮಾಡುವಂತೆ ಆಗ್ರಹಿಸಿದರು.
ಮಾನ್ವಿ ತಾಲೂಕಿನ ನೀರಮಾನ್ವಿ ಹಾಗೂ ಕಪಗಲ್ ಗ್ರಾಮ ಪಂಚಾಯತಿಯಲ್ಲಿ 15 ನೇ. ಹಣಕಾಸು ಯೋಜನೆ ಹಾಗೂ ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದ್ದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಕೂಡಲೇ ತನಿಖೆಗೆ ಗೊಳಪಡಿಸ ಬೇಕು ಎಂದು ಒತ್ತಾಯಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ