ಸಮಾಜ ಕಲ್ಯಾಣ ಇಲಾಖೆಯ ವಿರುದ್ಧ – ರೈತ ಸಂಘದಿಂದ ಪ್ರತಿಭಟನೆ.
ಮಾನ್ವಿ ಅ.08
ಸಮಾಜ ಕಲ್ಯಾಣ ಇಲಾಖೆ ತಾಲೂಕ ಅಧಿಕಾರಿ ನಟರಾಜ ಮಕ್ಕಳ ಹೆಸರಲ್ಲಿ ಲೂಟಿ ಮಾಡಿದ್ದಾರೆ. ಹೀಗಾಗಿ ಸೇವೆಯಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಶಾಸಕರ ಭವನದ ಮುಂದೆ ಪ್ರತಿಭಟನೆ ನಡೆಸಿದರು.

ರಾಯಚೂರು ಜಿಲ್ಲೆಯ ಮಾನ್ವಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ನಟರಾಜ ಅವರು ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಸೌಲಭ್ಯ ನೀಡದೆ, ವಂಚಿಸಿ ಮಕ್ಕಳ ಹೆಸರಲ್ಲಿ ಸೌಲಭ್ಯ ನೀಡಲಾಗಿದೆ ಎಂದು ಲಕ್ಷಾನು ಗಟ್ಟಲೆ ಲೂಟಿ ಮಾಡಿದ್ದು, ಸಮಗ್ರ ತನಿಖೆ ಮಾಡಬೇಕು ಎಂದು ತಾಲೂಕಾಧ್ಯಕ್ಷ ಹೊಳೆಯಪ್ಪ ಉಟಕನೂರು ಒತ್ತಾಯಿಸಿದರು.
ಮಾನ್ವಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ನಟರಾಜ ಅವರು ಮಕ್ಕಳಿಗೆ ದಿನಚರಿಯ ಪ್ರಕಾರ ಊಟದ ವ್ಯವಸ್ಥೆ ಮಾಡುತ್ತಿಲ್ಲ. ಸ್ನಾನದ ಕೋಣೆ ಶೌಚಾಲಯದ ಕೋಣೆ ವ್ಯವಸ್ಥೆ ನೋಡಿದರೆ ನಟರಾಜನ ದುರಾಡಳಿತ ಬಯಲಾಗಲಿದೆ ಎಂದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಚಾನೆಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ

