ಪಟ್ಟಣದ ಶ್ರೀ ಕಲ್ಮಠ ಶ್ರೀ ವಿರೂಪಾಕ್ಷ ಶಿವಾಚಾರ್ಯ ಆಯುರ್ವೇದ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಗೆ – 2025 ನೇ. ಸಾಲಿನ “ಆಯುರ್” ವಿದ್ಯಾಭೂಷಣ-2025 ಪ್ರಶಸ್ತಿ.
ಮಾನ್ವಿ ಅ.12





ಬೆಂಗಳೂರಿನ ಭಾರತೀಯ ವಿದ್ಯಾ ಭವನದ ಸಭಾಂಗಣದಲ್ಲಿ ಕನ್ನಡ ಪ್ರಭ ಹಾಗೂ ಸುವರ್ಣ ನ್ಯಾಸ್ ಸುದ್ದಿವಾಹಿನಿ ಸಂಸ್ಥೆಯವ ರಿಂದ ನಡೆದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಪ್ರಯುಕ್ತ ಆಯುರ್ವೇದ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಗೈದವರಿಗೆ ನೀಡುವ ಆಯುರ್ ವಿದ್ಯಾಭೂಷಣ-2025 ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಆಯುರ್ವೇದ ಕ್ಷೇತ್ರದಲ್ಲಿ ತೋರಿದ ಸಾಧನೆಗಾಗಿ ಪಟ್ಟಣದ ಶ್ರೀ ಕಲ್ಮಠ ಶ್ರೀ ವಿರೂಪಾಕ್ಷ ಶಿವಾಚಾರ್ಯ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಗೆ 2025 ನೇ. ಸಾಲಿನ ಆಯುರ್ ವಿದ್ಯಾಭೂಷಣ-2025 ಪ್ರಶಸ್ತಿಗೆ ಆಯ್ಕೆಯಾಗಿದ್ದು ಶನಿವಾರ ರಾಜ್ಯ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗರೆಡ್ಡಿ ರವರು ಕಾಲೇಜಿನ ಪ್ರಾಚಾರ್ಯರಾದ ಡಾ, ಜೀವನೇಶ್ವರಯ್ಯ ರವರಿಗೆ ಪ್ರಶಸ್ತಿ ಪತ್ರ ಹಾಗೂ ಫಲಕವನ್ನು ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಕನ್ನಡಪ್ರಭ ಹಾಗೂ ಸುವರ್ಣ ನ್ಯಾಸ್ ಸುದ್ದಿವಾಹಿನಿ ಸಂಸ್ಥೆಯ ಸಂಪಾದಕರಾದ ರವಿ ಹೆಗಡೆ ಹಾಗೂ ಪಂಚಮಸಾಲಿ ಪೀಠದ ಜಗದ್ಗರು ವಚನಾನಂದ ಮಹಾಸ್ವಾಮಿಗಳು, ಮಾದಾರ ಗುರು ಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ, ಎಂ.ಮೋಹನ್ ಆಳ್ವ ಇದ್ದರು. ಬಾಕ್ಸ್ ನ್ಯೂಸ್:-ಬೆಂಗಳೂರಿನ ಭಾರತೀಯ ವಿದ್ಯಾ ಭವನದ ಸಭಾಂಗಣದಲ್ಲಿ ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ಸುದ್ದಿ ವಾಹಿನಿ ಸಂಸ್ಥೆಯ ವರಿಂದ ಕಾಲೇಜಿನ ಪ್ರಾಚಾರ್ಯರಾದ ಡಾ, ಜೀವನೇಶ್ವರಯ್ಯ ಪ್ರಶಸ್ತಿಯನ್ನು ಸ್ವೀಕರಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ