ಇ-ಸ್ವತ್ತು ಮಾಡಿ ಕೊಡಲು 5,000 ರೂ. ಕೇಳಿರುವಂತೆ ಪಿಡಿಓ ಲತಾಬಾಯಿಯವರ ವಿರುದ್ಧ ಸೂಕ್ತ ಕಾನೂನು – ಕ್ರಮ ಜರುಗಿಸುವಂತೆ ಮೇಲಾಧಿಕಾರಿಗಳಿಗೆ ಆಗ್ರಹ.
ಕೊಟ್ಟೂರು ಸ.09





ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ತಾಲೂಕ ಪಂಚಾಯತಿ ಕಾರ್ಯಾಲಯದ ಮುಂದೆ ದಿನಾಂಕ:- 09 ಸೆಪ್ಟೆಂಬರ್ 2025 ರಂದು ಕಾಳಪುರ ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತಿಗೆ 5000 ರೂ ಲಂಚ ಕೇಳಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲತಾಬಾಯಿ ವಿರುದ್ಧ ಕಾನೂನು ಸೂಕ್ತ ಕ್ರಮ ಕೈಗೊಳ್ಳಲು ಧಿಕ್ಕಾರ ಘೋಷಣೆ ಕೂಗುತ್ತಾ ತಾಲೂಕಿನ ಪ್ರಗತಿಪರ ಸಂಘಟನೆಯ ಪದಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲು ಕೊಟ್ಟೂರು ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕ ಪ್ರಧಾನ ಕಾರ್ಯದರ್ಶಿ ಗುಡಿಯಾರ ಮಲ್ಲಿಕಾರ್ಜುನ ಮಾತನಾಡಿ ಕೊಟ್ಟೂರು ತಾಲೂಕು ಕಾಳಾಪುರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಲತಾಬಾಯಿ ಇವರು ಚೆನ್ನೆನಳ್ಳಿ ಗ್ರಾಮದ ಮಂಜುನಾಥ ಮತ್ತು ಮತ್ತಿತರರು ಇ-ಸ್ವತ್ತು ವಿತರಣೆಗೆ ಸಂಬಂಧಿಸಿದಂತೆ 5,000 ರೂ ಲಂಚ ಬೇಡಿಕೆ ಇಟ್ಟಿರುವವರಂತೆ ಈ ಬಗ್ಗೆ ರಾಷ್ಟ್ರ ಕಾಂತಿ ಸುದ್ದಿ ವಾಹಿನಿ ಹಲವು ಟಿವಿ ಮಾಧ್ಯಮಗಳಲ್ಲಿ ಪ್ರಕಟವಾಗಿರುತ್ತದೆ. ನಮ್ಮ ತಾಲೂಕಿನ ಘನತೆ ಕುಂದು ಹೋಗಲು ಈ ಪ್ರಕರಣ ಕಾರಣವಾಗಿರುತ್ತದೆ.
ಆದ್ದರಿಂದ ಕೊಟ್ಟೂರು ತಾಲೂಕು ಕಾಳಾಪುರ ಗ್ರಾಮ ಪಂಚಾಯಿತಿಯ ಪಿ.ಡಿ.ಓ ಲತಾಬಾಯಿ ಇವರ ಮೇಲೆ ಸಂಪೂರ್ಣ ತನಿಖೆ ಮಾಡಿ ತಪ್ಪಿಸ್ತರನ್ನು ಅಮಾನತ್ತಿನಲ್ಲಿ ಇಟ್ಟು ಸೂಕ್ತ ಕಾನೂನು ಕ್ರಮ ಕೈಗೊಳ್ಳ ಬೇಕೆಂದು ಈ ಮೂಲಕ ಆಗ್ರಹಿಸುತ್ತೇವೆ. ಒಂದು ವೇಳೆ ದಿನಾಂಕ ದಿನಾಂಕ 19-09-2025 ರ ಒಳಗಾಗಿ ಕಾಳಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತು ಮಾಡದಿದ್ದರೆ ಜಿಲ್ಲಾ ಪಂಚಾಯತಿ ಕಚೇರಿಯ ಮುಂಭಾಗದಲ್ಲಿ ಉಗ್ರವಾದ ಪ್ರತಿಭಟನೆಯನ್ನು ಮಾಡಲಾಗುವುದೆಂದು ಎಚ್ಚರಿಕೆ ನೀಡಿ ಪ್ರಗತಿಪರ ಸಂಘಟನೆ ಎಲ್ಲಾ ಪದಾಧಿಕಾರಿಗಳು ಸದಸ್ಯರು ಒತ್ತಾಯಿಸಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ಈರುಳ್ಳಿ ಬೆಳೆಗಾರರ ಸಂಘ ಜಿಲ್ಲಾ ಅಧ್ಯಕ್ಷ ಕೊಚಾಲಿ ಮಂಜಪ್ಪ ತಾಲೂಕು ಡಿ.ಎಸ್.ಎಸ್ ಅಧ್ಯಕ್ಷರು ಪಿ.ಚಂದ್ರಶೇಖರ, ರೇಣಪ್ಪ,ಅಯ್ಯನಳ್ಳಿ ಪರುಸಪ್ಪ,ಅಜೀತ್, ಮಂಜುನಾಥ, ವೀರಭದ್ರಪ್ಪ, ಪ್ರಗತಿಪರ ಸಂಘಟನೆ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರದೀಪ್.ಕುಮಾರ್.ಸಿ.ಕೊಟ್ಟೂರು