ಕೋಟಾ ಗ್ರಾಮ ಪಂಚಾಯತನಲ್ಲಿ ಪೋಷಣಾ ಅಭಿಯಾನ – ಸೀಮಂತ ಹಾಗೂ ಅನ್ನಪ್ರಾಶನ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲಾಗಿತ್ತು.
ಉಡುಪಿ ಅ.14





ಬ್ರಹ್ಮವರ ತಾಲ್ಲೂಕಿನ ಕೋಟ ಗ್ರಾಮ ಪಂಚಾಯತ್ ನಲ್ಲಿ ಸಮಗ್ರ ಮಕ್ಕಳ ಆರೋಗ್ಯ ಮತ್ತು ಪೋಷಣೆಯನ್ನು ಖಚಿತ ಪಡಿಸಿಕೊಳ್ಳುವ ನಿಟ್ಟಿನಲ್ಲಿ, ಕೋಟಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಿನಾಂಕ 09/10/2025 ರಂದು ಮಣೂರು ಮತ್ತು ಗಿಳಿಯಾರು ಗ್ರಾಮ ಮಟ್ಟದ ಪೋಷಣಾ ಅಭಿಯಾನ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದೊಂದಿಗೆ ಗರ್ಭಿಣಿಯರಿಗೆ ಸೀಮಂತ ಹಾಗೂ ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಮಾಧವ್ ರಾವ್ ಅವರು ಆಗಮಿಸಿ, ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು. ಪೌಷ್ಟಿಕಾಂಶದ ಕೊರತೆಯನ್ನು ನಿವಾರಿಸಲು ಮತ್ತು ಆರೋಗ್ಯಕರ ತಾಯಂದಿರು ಮತ್ತು ಮಕ್ಕಳನ್ನು ಸೃಷ್ಟಿಸಲು ಪೋಷಣಾ ಅಭಿಯಾನದ ಮಹತ್ವದ ಕುರಿತು ಅವರು ಸಮಗ್ರ ಮಾಹಿತಿಯನ್ನು ನೀಡಿದರು.
ಈ ಮಹತ್ವದ ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO), ಪಂಚಾಯತ್ ಅಧ್ಯಕ್ಷರು, ಸದಸ್ಯರು, ಮಿಷನ್ ಶಕ್ತಿ ಯೋಜನೆಯ ಆಯೋಗದ ಸದಸ್ಯರು, ಅಂಗನವಾಡಿ ಮೇಲ್ವಿಚಾರಕರು ಮತ್ತು ಕಾರ್ಯಕರ್ತೆಯರು ಸಕ್ರಿಯವಾಗಿ ಭಾಗವಹಿಸಿದ್ದರು. ಇದರ ಜೊತೆಗೆ, ಹೆಚ್ಚಿನ ಸಂಖ್ಯೆಯ ಪೋಷಕರು ಮತ್ತು ಗರ್ಭಿಣಿಯರು ಸಹ ಹಾಜರಿದ್ದು ಕಾರ್ಯಕ್ರಮದ ಪ್ರಯೋಜನ ಪಡೆದರು.
ಎಲ್ಲಾ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರದಿಂದ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು ಎಂದು ಪಂಚಾಯತ್ ಆಡಳಿತ ಮಂಡಳಿ ತಿಳಿಸಿದೆ. ಈ ಕಾರ್ಯಕ್ರಮವು ಪಂಚಾಯತ್‌ನ ಆರೋಗ್ಯ ಹಾಗೂ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ.
ವರದಿ:ಆರತಿ.ಗಿಳಿಯಾರು.ಉಡುಪಿ