ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ, ಕೊಲೆ ಖಂಡಿಸಿ – ಎಂ.ಬಿ.ವಿ.ಪಿ ಯಿಂದ ಬೃಹತ್ ಪ್ರತಿಭಟನೆ.
ಬನೋಸಿ ಅ.15





ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬನೋಸಿ ಗ್ರಾಮದ ಬಸಮ್ಮ.ಮಾನಪ್ಪ ಚಲವಾದಿ ಎಂಬ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ಮುದ್ದೇಬಿಹಾಳ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ಮಾಡಲಾಯಿತು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ವಿದ್ಯಾರ್ಥಿನಿ ಸಾವಿಗೆ ನ್ಯಾಯ ಸಿಗಬೇಕು ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಲೇಬೇಕು ಎಂದು ಘೋಷಣೆ ಕೂಗುತ್ತಾ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು, ಈ ಸಂದರ್ಭದಲ್ಲಿ ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಮಾತನಾಡಿ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಸೂಕ್ತ ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ವಿಧಿಸುವಂತೆ ತನಿಖೆಯನ್ನು ಮಾಡಬೇಕು ಯಾವುದೇ ಕಾರಣಕ್ಕೂ ತಪ್ಪಿತಸ್ಥ ಆರೋಪಿಗಳು ತಪ್ಪಿಸಿ ಕೊಳ್ಳದಂತೆ ಪೊಲೀಸ್ ಇಲಾಖೆ ಜಾಗೃತಿ ವಹಿಸಬೇಕು ಪದೇ ಪದೇ ಇಂತಹ ಪ್ರಕರಣಗಳು ನಡೆಯುತ್ತಿದ್ದು ಮಾನವ ಪ್ರಜ್ಞಾವಂತ ಸಮಾಜ ತಲೆ ತಗ್ಗಿಸುವಂತೆ ಆಗಿದೆ ಎಂದರು.

ಎಬಿವಿಪಿಯ ಜಿಲ್ಲಾ ಸಂಚಾಲಕ ಸಂದೀಪ ಅರಳಗುಂಡಿ ಹಾಗೂ ಎಬಿವಿಪಿಯ ಮುಖಂಡ ಶಿವನಗೌಡ ಬಿರಾದಾರ ಮಾತನಾಡಿ ಸಮಾಜದಲ್ಲಿ ಇಂತಹ ಘಟನೆಗಳು ನಡೆಯ ಬಾರದು, ಸರ್ಕಾರದ ವ್ಯವಸ್ಥೆಗಳು ಇಂತಹ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳಿಗೆ ಗಲ್ಲು ಶಿಕ್ಷೆ ಅಂತ ಕಠಿಣ ಕ್ರಮವನ್ನು ಕೈಗೊಂಡಾಗ ಮಾತ್ರ ಇಂತಹ ಘಟನೆಗಳು ನಿಲ್ಲುವುದಕ್ಕೆ ಸಾಧ್ಯವಾಗುತ್ತದೆ ಅಂತಹ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು. ಪ್ರಮುಖರಾದ ರವೀಂದ್ರ ಬಿರಾದಾರ, ನಗರ ಕಾರ್ಯದರ್ಶಿ ಮಲ್ಲಮ್ಮ ಪಾಟೀಲ, ಭೂಮಿಕಾ ಕತ್ತಿ, ನಿಖಿಲ ಮಲಗಲ್ಡಿನ್ನಿ, ರಮೇಶ ಹೂಗಾರ, ಪಲ್ಲವಿ ದೊಡ್ಡಮನಿ, ಸಹನಾ ವಡವಡಗಿ, ಪ್ರಸನ್ನ ತಾಳಿಕೋಟೆ, ಸಚಿನ ಜಾಧವ, ಮಹೇಶ ಬಾವೂರ, ಕೃಷ್ಣಾ ಮೂರ್ತಿ ಹಾಗೂ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಬಸವರಾಜ.ಸಂಕನಾಳ.ಮುದ್ದೇಬಿಹಾಳ