ಮಹಾತ್ಮರು ಗುರು ಹಿರಿಯರಿಗೆ ಗೌರವ ಕೊಡುವುದನ್ನು ಕಲಿಯಬೇಕು – ಯತೀಶ್.ಎಂ ಸಿದ್ದಾಪುರ.
ಚಳ್ಳಕೆರೆ ಅ.16





ಮಹಾತ್ಮರು- ಗುರು ಹಿರಿಯರಿಗೆ ಗೌರವ ಕೊಡುವುದನ್ನು ಕಲಿಯಬೇಕು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂಸೇವಕ ಹಾಗೂ ಲೇಖಕ ಯತೀಶ್ ಎಂ ಸಿದ್ದಾಪುರ ತಿಳಿಸಿದರು.

ಶಿವ ನಗರದ ಶ್ರೀಮತಿ ಜಿ ಯಶೋಧಾ ಪ್ರಕಾಶ್ ಅವರ ನೇತೃತ್ವದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ ಮಾಡುತ್ತ ಮಾತನಾಡುತ್ತಿದ್ದರು.

ಮಹಾತ್ಮರಿಗೆ ಗೌರವ ಕೊಡದೇ ಅದರ ದುಷ್ಪರಿಣಾಮ ಅನುಭವಿಸುವ ಘಟನೆಯನ್ನು ಶ್ರೀಮಾತೆ ಶಾರದಾದೇವಿಯವರ ಜೀವನದಲ್ಲಿ ಕಾಣುತ್ತೇವೆ.ಆದ್ದರಿಂದ ಅವರನ್ನು ಗೌರವಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಈ ಸತ್ಸಂಗದ ಪ್ರಯುಕ್ತ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಶ್ರೀದೇವಿಸ್ತುತಿ ಪಠಣ, ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು.
ಸತ್ಸಂಗ ಕಾರ್ಯಕ್ರಮದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಎಸ್.ಉಮಾ, ಶಕುಂತಲಾ, ಶಾಂತಮ್ಮ,ಮಂಗಳಾ, ಕವಿತಾ ಗುರುಮೂರ್ತಿ, ಶೈಲಜಾ, ಸಂಗೀತ, ರಶ್ಮಿ, ಗೀತಾಲಕ್ಷ್ಮೀ, ವೀರಮ್ಮ ಭಾಗವಹಿಸಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.