ನೊಂದಾಯಿತ ಕುಟುಂಬಗಳ ಜಾಬ್ ಕಾರ್ಡ್ ವ್ಯಾಲಿಡೇಶನ್ ಇ-ಕೆವೈಸಿ ಅಪ್ಡೇಟ್ – ಮಾಡಿಸುವಂತೆ ತಾಲೂಕ ಪಂಚಾಯತ ಇ.ಓ ರವರಿಂದ ಸೂಚನೆ.
ಸಿಂದಗಿ ಅ.17





ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನೊಂದಾಯಿತ ಕುಟುಂಬಗಳ ಜಾಬ್ ಕಾರ್ಡ್ ವ್ಯಾಲಿಡೇಶನ್ ಇ-ಕೆವೈಸಿ ಮುಖಾಂತರ ಪೋರ್ಣ ಗೊಳಿಸಲಾಗುತ್ತಿದೆ. ಎಲ್ಲಾ ಕೂಲಿಕಾರರು ತಪ್ಪದೇ ಇ-ಕೆವೈಸಿ ಅಪ್ಡೇಟ್ ಮಾಡಿಸುವಂತೆ ಸಿಂದಗಿ ಮತ್ತು ಆಲಮೇಲ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಶ್ರೀ ರಾಮು.ಜಿ ಅಗ್ನಿ ಅವರು ತಿಳಿಸಿದ್ದಾರೆ.ಕೇಂದ್ರ ಗ್ರಾಮೀಣಾಭಿವೃದ್ದಿ ಮಂತ್ರಾಲಯದ ಆದೇಶದಂತೆ ಬೆಂಗಳೂರಿನ ಗ್ರಾಮೀಣಾಭಿವೃದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಕಾರ್ಯ ನಿರ್ವಣಾಧಿಕಾರಿ ಯವರ ಸೂಚನೆಯಂತೆ ವಿಜಯಪುರ ಜಿ.ಪಂ ಸಿ.ಇ.ಓ ರವರು ಹಾಗೂ ಉಪ ಕಾರ್ಯದರ್ಶಿಗಳ ಮಾರ್ಗದರ್ಶನದಂತೆ ಸಿಂದಗಿ ಹಾಗೂ ಆಲಮೇಲ ತಾಲೂಕುಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸಕ್ರಿಯ ಕೂಲಿಕಾರರ ಜಾಬ್ ಕಾರ್ಡನ್ನು ಇ-ಕೆವೈಸಿ ಮುಖಾಂತರ ವ್ಯಾಲಿಡೇಟ್ ಮಾಡಲಾಗುತ್ತಿದೆ. ನರೇಗಾ ಯೋಜನೆಯ ಎಲ್ಲಾ ಗ್ರಾ.ಪಂಗಳ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡ ವ್ಯಾಲಿಡೇಶನ್ ಅಭಿಯಾನ ಮಾದರಿಯಲ್ಲಿ ಅತೀ ತುರ್ತಾಗಿ ಇ-ಕೆವೈಸಿ ಮುಖಾಂತರ ಪೋರ್ಣಗೊಳಿಲು ಸೂಚಿಸಿದ್ದಾರೆ ಎಂದು ತಿಳಿಸಿದರು. ನರೇಗಾ ಯೋಜನೆಯಡಿ ನೊಂದಾಯಿತ ಕೂಲಿಕಾರರಲ್ಲಿ ಸಕ್ರಿಯ ಕೂಲಿಕಾರರ ಮಾಹಿತಿಯನ್ನು ಎನ್.ಎಮ್.ಎಮ್.ಎಸ್ ಮೊಬೈಲ ತಂತ್ರಾಂಶದಲ್ಲಿ ಇ-ಕೆವೈಸಿ ಮಾಡುವ ಬಗ್ಗೆ ಈಗಾಗಲೇ ಎಲ್ಲಾ ಗ್ರಾಮ ಪಂಚಾಯತಿ, ಗ್ರಾಮ ಮಟ್ಟದಲ್ಲಿ ಜನರಿಗೆ ಅರಿವು ಮೂಡಿಸಲಾಗುತ್ತಿದೆ. ಗ್ರಾಮ ಪಂಚಾಯತ್ ಗಳಲ್ಲಿ ಉಚಿತವಾಗಿ ಇ-ಕೆವೈಸಿ ಅಪ್ಡೇಟ್ ಮಾಡಿ ಕೊಡಲಾಗುತ್ತಿದೆ. ಜತೆಗೆ ಗ್ರಾಮ ಕಾಯಕ ಮಿತ್ರ, ಗಣಕ ಯಂತ್ರ ನಿರ್ವಾಹಕ, ಬಿ.ಎಫ್.ಟಿ, ಬಿಲ್ ಕಲೆಕ್ಟರ್ ಹಾಗೂ ಸಿಬ್ಬಂದಿಗಳ ಮೂಲಕ ಇ-ಕೆವೈಸಿ ಮಾಡಿಸಿ ಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಆಯಾ ಗ್ರಾಮ ಪಂಚಾಯತಿ ಪಿ.ಡಿ.ಓ ಕಾರ್ಯದರ್ಶಿ, ಎಸ್.ಡಿ.ಎ.ಎ ಡಿ.ಇ.ಓ, ಜಿ.ಕೆ.ಎಮ್ ಅವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ರೇವಣಸಿದ್ದಯ್ಯ.ಜಿ.ಹಿರೇಮಠ.ಆಲಮೇಲ