250 ರೋಗಿಗಳ ಬೆಡ್ ಹಾಸಿಗೆಗಳ – ಸ್ಥಳ ಪರಿಶೀಲಿಸಿದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್.
ಮೊಳಕಾಲ್ಮುರು ಅ.18





17/10/2025 ರಂದು ಮೊಳಕಾಲ್ಮೂರಿನ ಪಟ್ಟಣದ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ಆಂಧ್ರ ಪ್ರದೇಶ ಗಡಿ ಭಾಗಕ್ಕೆ ಹೊಂದಿ ಕೊಂಡಿರುವ ತಾಲ್ಲೂಕಿನಲ್ಲಿ ಹೊಸ 250 ರೋಗಿಗಳ ಬೆಡ್ ಹಾಸಿಗೆಗಳ ಸಾಮರ್ಥ್ಯವುಳ್ಳ ಆಸ್ಪತ್ರೆ ನಿರ್ಮಿಸಲು ಯೋಜನೆ ರೂಪಿಸಲಾಗುತ್ತಿದೆ. ಮತ್ತು ಇದರ ಜಾಗ ವೀಕ್ಷಣೆ ಮಾಡಿದ ಹಿನ್ನೆಲೆಯಲ್ಲಿ ಇಂದು ಖುದ್ದಾಗಿ ಆಸ್ಪತ್ರೆಗೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಶಾಸಕರಾದ ಶ್ರೀ ಎನ್ ವೈ ಗೋಪಾಲಕೃಷ್ಣ ರವರು ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚೇತನ್ ದ್ರಾಕ್ಷಿ ನಿಗಮ ಮಂಡಳಿ ಅಧ್ಯಕ್ಷ ಯೋಗೇಶ್ ಬಾಬು ಟಿ.ಕೆ ಕಲಿ ಮುಲ್ಲಾ ಖಾದರ್ ಮಾಜಿ ಪಟ್ಟಣ ಪಂಚಾಯತ ಅಧ್ಯಕ್ಷ ಪ್ರಕಾಶ್ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು