ಜ್ಯೋತಿ ಗಿರೀಶ್ ರವರಿಗೆ “ಸಂಗೀತ ರತ್ನ” – ರಾಜ್ಯೋತ್ಸವ ಪ್ರಶಸ್ತಿ.
ಚಿತ್ರದುರ್ಗ ಅ.20





ನಗರದ ಜ್ಯೋತಿ ಗಿರೀಶ್ ಇವರು ಸಂಗೀತ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಯನ್ನು ಪರಿಗಣಿಸಿ, ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿಯವರು “ಸಂಗೀತ ರತ್ನ” ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಿದ್ದಾರೆ.

ಸಂಘಟನೆಯವರು ನವೆಂಬರ್ 30 ರಂದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ಪಕ್ಕದಲ್ಲಿರುವ ನಯನ ಸಭಾಂಗಣದಲ್ಲಿ ಬೆಳಿಗ್ಗೆ 10 ರಿಂದ 2 ಗಂಟೆಯ ವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.