ಶ್ರೀರಾಮಕೃಷ್ಣರು ಏಸುವಿನ ಅವತಾರದಲ್ಲಿ ದರ್ಶನ ನೀಡಿದ್ದರು – ಶ್ರೀಮತಿ ಪಿ.ಎಸ್ ಮಾಣಿಕ್ಯ ಸತ್ಯನಾರಾಯಣ ಅಭಿಪ್ರಾಯ.
ಚಳ್ಳಕೆರೆ ಅ.23




ಶ್ರೀರಾಮಕೃಷ್ಣ ಪರಮಹಂಸರು ದಕ್ಷಿಣೇಶ್ವರದಲ್ಲಿ ವಿಲಿಯಮ್ಸ್ ಎಂಬ ಕ್ರೈಸ್ತ ಭಕ್ತನಿಗೆ ಏಸುವಿನ ರೂಪದಲ್ಲಿ ದರ್ಶನ ನೀಡಿದ್ದರು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸದ್ಭಕ್ತರು ಹಾಗೂ ಸಮಾಜ ಸೇವಕರಾದ ಶ್ರೀಮತಿ ಪಿ.ಎಸ್.ಮಾಣಿಕ್ಯ ಸತ್ಯನಾರಾಯಣ ತಿಳಿಸಿದರು.

ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಆಯೋಜಿಸಿದ್ದ ಸತ್ಸಂಗ ಕಾರ್ಯಕ್ರಮದಲ್ಲಿ ಯುಗಾವತಾರ ಶ್ರೀರಾಮಕೃಷ್ಣ ಭಾಗ-2ರ ಗ್ರಂಥ ಪಾರಾಯಣ ಮಾಡುತ್ತ ಅವರು ಮಾತನಾಡಿದರು.

ಈ ಸತ್ಸಂಗದ ಪ್ರಯುಕ್ತ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಕಬೀರರ ದೋಹೆಗಳು,ಭಜನೆ ಹಾಗೂ ದಿವ್ಯತ್ರಯರಿಗೆ ಮಂಗಳಾರತಿ ನಡೆಯಿತ.
ಸತ್ಸಂಗದಲ್ಲಿ ಶ್ರೀಮತಿ ಜಿ.ಯಶೋಧಾ ಪ್ರಕಾಶ್, ಯತೀಶ್ ಎಂ ಸಿದ್ದಾಪುರ, ಚೇತನ್, ಸಂತೋಷ್ ಸೇರಿದಂತೆ ಸದ್ಭಕ್ತರು ಉಪಸ್ಥಿತರಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.