ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ – ಗಫೂರ್ ಸಾಬ್ ಅಧಿಕಾರ ಸ್ವೀಕಾರ.
ಮಾನ್ವಿ ಅ.23




ಮಾನ್ವಿ ತಾಲೂಕ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಗಫೂರ್ ಸಾಬ್ ಹಾಗೂ ಸದಸ್ಯರು ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ಗಳ ಮೆರವಣಿಗೆ ನಡೆಸಿದರು.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಯಾರಿಗೆ ನೀಡಲಾಗುತ್ತದೆ ಎಂದು ಚರ್ಚೆಗೆ ಗ್ರಾಸವಾಗಿತ್ತು. ಆದರೆ ಶಾಸಕ ಹಂಪಯ್ಯ ನಾಯಕ ಹಾಗೂ ಸಚಿವ ಎನ್.ಎಸ್ ಬೋಸರಾಜು ಅವರ ಆಪ್ತರೆಂದೆ ಗುರುತಿಸಿ ಕೊಂಡಿದ್ದ ಗಫೂರ್ ಸಾಬ್ ಅವರಿಗೆ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಒಲಿದಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಫೂರ್ ಸಾಬ್ ಮಾತನಾಡಿ, ಸರಕಾರದ ನಿಯಮದಂತೆ ಕಾನೂನು ಬದ್ಧವಾಗಿ ಕೆಲಸ ಮಾಡುತ್ತೇನೆಂದು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಫೂರ್ ಸಾಬ್ ಮಾಧ್ಯಮಕ್ಕೆ ತಿಳಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ