ಶಾಸಕ ಹಂಪಯ್ಯ ನಾಯಕರು ಧ್ವನಿ ಎತ್ತುತ್ತಿಲ್ಲವೆಂದು – ರೈತರ ಆಕ್ರೋಶ.
ಮಾನ್ವಿ ಅ.24


ಮಾನ್ವಿ ತಾಲೂಕಲ್ಲಿ ಹತ್ತಿ ಹಾಗೂ ಭತ್ತ ಖರೀದಿ ಕೇಂದ್ರವನ್ನು ರಾಜ್ಯ ಸರಕಾರ ಕೂಡಲೆ ಪ್ರಾರಂಭಿಸ ಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಲ್ಲಿ ಹತ್ತಿ ಖರೀದಿ ಕೇಂದ್ರ ಪ್ರಾರಂಭ ಮಾಡದ ಹಿನ್ನೆಲೆಯಲ್ಲಿ ರೈತರ ಲಾಭ ದಲ್ಲಾಳಿಗಳ ಪಾಲಾಗುತ್ತಿದೆ. ಮಾನ್ವಿ ಶಾಸಕ ಹಂಪಯ್ಯ ನಾಯಕ ಅವರು ರೈತರ ಬಗ್ಗೆ ಕಾಳಜಿ ವಹಿಸಿ ಹತ್ತಿ ಹಾಗೂ ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲು ಮುಂದಾಗಬೇಕು ಎಂದರು.
ಶಾಸಕ ಹಂಪಯ್ಯ ನಾಯಕ ಅವರು ವಿಧಾನ ಸಭೆಯಲ್ಲಿ ಏನು ಮಾತಾಡುತ್ತಿಲ್ಲ ರೈತರ ಬಗ್ಗೆ ಕಾಳಜಿಯೇ ಇಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ರೈತರಿಗೆ ವಂಚನೆ ಯಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ
