ಮಕ್ಕಳಿಗೆ ಬಾಲ್ಯದಲ್ಲಿಯೇ ಸದ್ಗುಣಗಳನ್ನು ಬೆಳೆಸಬೇಕು – ಶ್ರೀಮತಿ ಜಿ.ಯಶೋಧಾ ಪ್ರಕಾಶ್ ಅಭಿಪ್ರಾಯ.
ಚಳ್ಳಕೆರೆ ಅ.25


ಮಕ್ಕಳಿಗೆ ಬಾಲ್ಯದಲ್ಲಿಯೇ ಸದ್ಗುಣಗಳನ್ನು ಬೆಳೆಸಬೇಕು ಎಂದು ಶಿವನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಜಿ ಯಶೋಧಾ ಪ್ರಕಾಶ್ ಪಾಲಕರಿಗೆ ಕಿವಿಮಾತು ಹೇಳಿದರು.
ಶಿವ ನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ ಮಾಡುತ್ತ ಮಾತನಾಡುತ್ತಿದ್ದರು.

ಸತ್ಸಂಗದ ಪ್ರಯುಕ್ತ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಶ್ರೀದೇವಿಸ್ತುತಿ ಪಾರಾಯಣ, ವಿಶೇಷ ಭಜನೆ ಮತ್ತು ದಿವ್ಯತ್ರಯರಿಗೆ ಮಂಗಳಾರತಿ ನಡೆಯಿತು.

ಸತ್ಸಂಗ ಸಭೆಯಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಎಚ್ ಲಕ್ಷ್ಮೀದೇವಮ್ಮ , ಎಸ್.ಉಮಾ, ಶಕುಂತಲಾ, ಗೀತಾ, ಶಾಂತಮ್ಮ, ಪಿ.ಎಸ್.ಮಾಣಿಕ್ಯ ಸತ್ಯನಾರಾಯಣ, ಯತೀಶ್ ಎಂ ಸಿದ್ದಾಪುರ, ಕವಿತಾ ಗುರುಮೂರ್ತಿ, ಕೃಷ್ಣವೇಣಿ, ವಿಜಯಲಕ್ಷ್ಮೀ, ಭ್ರಮರಂಭಾ, ನಾಗರತ್ನಮ್ಮ, ಜಯಮ್ಮ,ಮಂಗಳಾ, ಗೀತಾಲಕ್ಷ್ಮೀ, ಸುಧಾಮಣಿ, ಭಾಗ್ಯಲಕ್ಷ್ಮೀ ಪಾಲ್ಗೊಂಡಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

