ಇರಾಕ್ ಇರಾನ್ ಗೆ ಬಸರಕೋಡದ ಬಾಳೆ ಹಣ್ಣು – ಅತಿವೃಷ್ಠಿ ಸಮಯದಲ್ಲೂ ಲಾಭ ಕಂಡ ರೈತ.
ಬಸರಕೋಡ ಅ.28


ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ರೈತ ಹೇಮರೆಡ್ಡಿ.ಬ ಮೇಟಿ ಅವರು ಬೆಳೆದ ಬಾಳೆ (ಜಿ-9) ಬೆಳೆಗೆ ಹೊರ ದೇಶದಲ್ಲಿ ಮಾರುಕಟ್ಟೆ ಲಭಿಸಿದೆ. ರೈತ ಹೇಮರೆಡ್ಡಿ.ಬ ಮೇಟಿ ಬಾಳೆ ಹಣ್ಣು ಇರಾಕ್, ಇರಾನ ದೇಶಗಳಿಗೆ ರಫ್ತು ಮಾಡಲು ಮುಂದಾಗಿದ್ದಾರೆ. 20 ಎಕರೆ ಜಮೀನಿನಲ್ಲಿ ಬೆಳೆದಿರುವ ಬಾಳೆ ಭಾಗಶ ಕಟಾವಿಗೆ ಬಂದಿದೆ. ಅವರ ಪುತ್ರ ಬಾಪುಗೌಡ ಮೇಟಿ ವಿದೇಶಿ ಮಾರುಕಟ್ಟೆಯ ಸಂಪರ್ಕ ಸಾಧಿಸಿದ್ದಾರೆ. ಮಧ್ಯಪ್ರದೇಶ ಗುಜರಾತದಿಂದ ಸಸಿಗಳನ್ನು ತರಿಸಿ ಕೊಂಡಿದ್ದೆವು. ಸ್ಥಳೀಯ ಮಾರುಕಟ್ಟೆಯಲ್ಲಿ ಕೆ.ಜಿಗೆ ₹3 ರಿಂದ ₹4 ಕೆಜಿಗೆ ಹೇಳುತ್ತಾರೆ. ಇಷ್ಟು ಕಡಿಮೆಗೆ ನೀಡಿದರೆ ನಷ್ಟ ಖಂಡಿತ. ಎಕರೆಗೆ ತಲಾ ₹1. 15 ಲಕ್ಷದಂತೆ ಖರ್ಚು ಮಾಡಿದ್ದು, 20 ಎಕರೆಗೆ 1 ಸಾವಿರ ಟನ್ ಬಾಳೆ ಬರುವ ನಿರೀಕ್ಷೆ ಇದೆ ಎಂದು ರೈತ ಹೇಮರೆಡ್ಡಿ ಮೇಟಿ ತಿಳಿಸಿದರು.

ಅಂತರಾಷ್ಟ್ರೀಯ ಮಾರುಕಟ್ಟೆಗೆ ಬೆಳೆ ತಲುಪಿಸಲು ಮಿರಜ್ ನ ಚಾಂದ್ ಫ್ರೂಟ್ಸ್ ಅವರನ್ನು ಸಂಪರ್ಕಿಸಲಾಗಿತ್ತು, ಅವರು ಖರೀದಿಗೆ ಒಪ್ಪಿದರು. ಕಂಟೆನ್ನರಗಳಲ್ಲಿ ಬಾಳೆಕಾಯಿಗಳನ್ನು ಸಂಗ್ರಹಿಸಿ ಹಡಗುಗಳ ಮೂಲಕ ಇರಾಕ್ ಇರಾನ್ ಗೆ ಕಳುಹಿಸುತ್ತಿದ್ದೇವೆ. ಕೆ, ಜಿಗೆ ₹13 ರಂತೆ ಈ ವರೆಗೆ 35 ಟನ್ ಬಾಳೆಕಾಯಿ ಕಳಿಸಲಾಗಿದೆ. ಎಂದು ತಿಳಿಸಿದರು. ಪಶ್ಚಿಮ ಬಂಗಾಳದ ಕಾರ್ಮಿಕರು ಬಾಳೆ ಗೊನೆಯನ್ನು ಕತ್ತರಿಸಿ ಅದು ಕೆಡದಂತೆ ವೈಜ್ಞಾನಿಕ ಕ್ರಮದಲ್ಲಿ ಪ್ಯಾಕಿಂಗ್ ಮಾಡಲು ಪಶ್ಚಿಮ ಬಂಗಾಳದ 25 ಕಾರ್ಮಿಕರು ನಾಲ್ಕು ದಿನಗಳಿಂದ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು. ‘ಗ್ರಾಮದ ರೈತರೊಬ್ಬರು ಬೆಳೆದಿರುವ ಬಾಳೆ ಅನ್ಯ ದೇಶಕ್ಕೆ ಹೋಗುತ್ತಿದೆ. ನಮ್ಮಲ್ಲೂ ಉತ್ಕೃಷ್ಟ ದರ್ಜೆಯ ಬಾಳೇ ಕೃಷಿ ನಡೆದಿರುವುದು ಹೆಮ್ಮೆಯ ಸಂಗತಿ’ ಎಂದು ಸ್ಥಳೀಯ ರೈತರು ಹೇಳುತ್ತಾರೆ.

“ಗುಣಮಟ್ಟದ ಬಾಳೆ : ‘ದೇವರ ನಿಂಬರಗಿಯ ಯಂಕಣ್ಣ ಬಿರಾದರ್ ಅವರು ಬಸರಕೋಡದಲ್ಲಿ ಗುಣಮಟ್ಟದ ಬಾಳೆ ಇದೆ ಎಂದು ತಿಳಿಸಿದ್ದರು. ಹೇಮರೆಡ್ಡಿ ಅವರು ಬೆಳೆದ ಬಾಳೆ ರಫ್ತು ಮಾಡಲು ಯೋಗ್ಯವಾಗಿದೆ. ಖರೀದಿ ಒಪ್ಪಂದ ಆಗಿದೆ. ನವಂಬರ್ 1 ರಂದು ಗುಣಮಟ್ಟದ ಪ್ಯಾಕಿಂಗ್ ನಲ್ಲಿ ಇರಾನ್ ಇರಾಕ್ ಸೌದಿ ಅರೇಬಿಯಾಕ್ಕೆ ರವಾನೆ ಯಾಗಲಿದೆ’ ಎನ್ನುತ್ತಾರೆ ಬಾಳೆ ಖರೀದಿದಾರ ಅಬೂಬಕರ್ ಕರೋಶಿ ಯವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಬಸವರಾಜ.ಸಂಕನಾಳ.ಮುದ್ದೇಬಿಹಾಳ

