ವೃತ್ತಿ ತರಬೇತಿ ಕೇಂದ್ರ ಕಾರ್ಯಕ್ರಮ ಉದ್ಘಾಟಿಸಿದ – ಶಾಸಕನ ಪುತ್ರ ಶಿವರಾಜ ನಾಯಕ.
ಮಾನ್ವಿ ಅ.29


ಕುಟುಂಬ ನಿರ್ವಹಣೆಯ ಜೊತೆಗೆ ಮಹಿಳೆಯರು ಹೊಲಿಗೆ ತರಬೇತಿ ಪಡೆದು ಆರ್ಥಿಕವಾಗಿ ಸಬಲರಾಗಬೇಕು ಎಂದು ಶಾಸಕ ಹಂಪಯ್ಯ ನಾಯಕ ಪುತ್ರ ಶಿವರಾಜ ನಾಯಕ ತಿಳಿಸಿದರು.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ತಾಲೂಕ ಪಂಚಾಯತಿ ಕಟ್ಟಡದಲ್ಲಿ ಸೇವಾ ಜನ ಶಿಕ್ಷಣ ಸಂಸ್ಥಾನ ಬುಡಕಟ್ಟು ಕೌಶಲ್ಯ ಕೇಂದ್ರ ರಾಯಚೂರು ಹಮ್ಮಿಕೊಂಡಿದ್ದ ವೃತ್ತಿ ಕೌಶಲ್ಯಗಳ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರ ಪರಿಶಿಷ್ಟ ಪಂಗಡ ಇಲಾಖೆಯಿಂದ ಬುಡಕಟ್ಟು ಜನಾಂಗಕ್ಕಾಗಿ ಸರಕಾರ ನಾನಾ ಯೋಜನೆಗಳನ್ನು ಜಾರಿಗೆ ತಂದಿದೆ. ಪರಿಶಿಷ್ಟ ಪಂಗಡ ಜನಾಂಗದ ಮಹಿಳೆಯರು ತರಬೇತಿ ಪಡೆದು ಸಬಲರಾಗಬೇಕು ಎಂದು ಸಲಹೆ ನೀಡಿದರು.
ಪುರ ಸಭೆಯ ವಿರೋಧ ಪಕ್ಷದ ನಾಯಕ ರಾಜಾ ಮಹೇಂದ್ರ ನಾಯಕ ಮಾತನಾಡಿ, ಪರಿಶಿಷ್ಟ ಪಂಗಡದ ಜನಾಂಗಕ್ಕಾಗಿ ಸರಕಾರ ಯೋಜನೆ ಜಾರಿಗೆ ತಂದಿದೆ ಎಂದರೆ ನಮ್ಮ ಜನಾಂಗದ ಶ್ರೇಯೋಭಿವೃದ್ಧಿಗಾಗಿ. ಹೀಗಾಗಿ ಮಹಿಳೆಯರು ಸಬಲರಾಗುವುದರ ಜೊತೆಗೆ ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ನೀಡಬೇಕು ಎಂದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ

