ಕುಷ್ಠ ರೋಗ ಪತ್ತೆ ಹಚ್ಚುವ ಆಂದೋಲನ ಅಂಗವಾಗಿ – ಆರೋಗ್ಯ ಇಲಾಖೆಯಿಂದ ಜಾಗೃತಿ ಜಾಥಾ.
ಮಾನ್ವಿ ನ.04

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಸ್ಪರ್ಶ್ ಕುಷ್ಠ ರೋಗ ನಿರ್ಮೂಲನ ಕಾರ್ಯಕ್ರಮ ಅಂಗವಾಗಿ ಕುಷ್ಠ ರೋಗ ಪತ್ತೆ ಹಚ್ಚುವ ಅಂದೋಲನಕ್ಕೆ ತಾಲೂಕು ಆರೋಗ್ಯಧಿಕಾರಿ ಡಾ, ಶರಣಬಸವರಾಜ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿ ತಾಲ್ಲೂಕಿನಾದ್ಯಂತ ನ.3 ರಿಂದ ನ.19 ರ ವರೆಗೆ ಸಾರ್ವಜನಿಕರಿಗೆ ಕುಷ್ಠ ರೋಗದ ಬಗ್ಗೆ ಆರಿವು ಮತ್ತು ಜಾಗೃತಿ ಮೂಡಿಸುವ ಅಂಗವಾಗಿ ಕುಷ್ಠ ರೋಗ ಪತ್ತೆ ಹಚ್ಚುವ ಅಂದೋಲನವನ್ನು ಹಮ್ಮಿಕೊಳ್ಳಲಾಗಿದ್ದು.
ಆರೋಗ್ಯ ಇಲಾಖೆಯಿಂದ ಪ್ರತಿ ಮನೆ ಮನೆಗೆ ತೆರಳಿ ಕುಷ್ಟರೋಗದ ಬಗ್ಗೆ ಜಾಗೃತಿ ಮೂಡಿಸಿ ಕುಷ್ಟ ರೋಗದ ಲಕ್ಷಣಗಳಿರುವವರು ಕಂಡು ಬಂದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರಿಂದ ಪರೀಕ್ಷಿಸಿ ಅಗತ್ಯವಾದ ಉಚಿತ ಚಿಕಿತ್ಸೆಯನ್ನು ನೀಡಲಾಗುವುದು.
ಕುಷ್ಠ ರೋಗವು ಮೈಕೋಬ್ಯಾಕ್ಟೀರಿಯಂ ಲೆಪ್ರ ಎಂಬ ಸೂಕ್ಷ್ಮಾಣುವಿನಿಂದ ಬರುವ ಚರ್ಮ ಹಾಗೂ ನರಗಳಿಗೆ ಸಂಬಂಧಿಸಿದ ಕಾಯಿಲೆ ಯಾಗಿದ್ದು ದೇಹದ ಯಾವುದೇ ಭಾಗದಲ್ಲಿ ಸ್ಪರ್ಶ ಜ್ಞಾನವಿಲ್ಲದೆ ತಿಳಿ ಬಿಳಿ ಅಥಾವಾ ತಾಮ್ರ ಬಣ್ಣದ ಮಚ್ಚೆಗಳಿಂದ ಕೂಡಿದು ಕೂದಲು, ನವೆ, ತುರಿಕೆ ಇಲ್ಲದೆ ಇರುವುದು. ಕೈಕಾಲುಗಳಲ್ಲಿ ಜೋಮು, ಸ್ಪರ್ಶ ಜ್ಞಾನ ಇಲ್ಲದೆ ಇರುವುದು. ಹೊಳೆಯುವ ಚರ್ಮ ಇವುಗಳು ಪ್ರಮುಖ ಲಕ್ಷಣಗಳಾಗಿದ್ದು ನಮ್ಮ ಆರೋಗ್ಯ ಇಲಾಖೆಯ ಆರೋಗ್ಯ ಶಿಕ್ಷಾಣಾಧಿಕಾರಿಗಳು, ಆಶಾ ಕಾರ್ಯಕರ್ತರು ಮನೆ, ಮನೆಗೆ ಭೇಟಿ ನೀಡಿ ಜನರಲ್ಲಿ ಕುಷ್ಟ ರೋಗದ ಬಗ್ಗೆ ಜಾಗೃತಿ ಮೂಡಿಸಿವ ಲಕ್ಷಣಗಳು ಕಂಡುಬಂದಲ್ಲಿ ವೈದ್ಯರು ಹೆಚ್ಚಿನ ಪರೀಕ್ಷೆ ಮಾಡಿ ಅಗತ್ಯ ಚಿಕಿತ್ಸೆ ನೀಡುತ್ತಾರೆ.
ಕುಷ್ಟ ರೋಗದ ಪ್ರಾರಂಭಿಕ ಲಕ್ಷಣಗಳು ಕಂಡು ಬಂದಾಗ ಬಹು ಔಷಾಧಿ ಚಿಕಿತ್ಸ ಪದ್ದತಿಯಿಂದ ಸಂಪೂರ್ಣವಾಗಿ ಗುಣ ಪಡಿಸಬಹುದು ಮತ್ತು ಕ್ರಮ ಬದ್ದವಾದ ಚಿಕಿತ್ಸೆ ಹಾಗೂ ಆರೈಕೆ ನೀಡಿದಲ್ಲಿ ಅಂಗವಿಕಲತೆಯನ್ನು ತಡೆಯಬಹುದು ಎಂದು ತಿಳಿಸಿದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕುಷ್ಠ ರೋಗ ನಿರ್ಮೂಲನೆ ಅಂಗವಾಗಿ ಜಾಗೃತಿ ಜಾಥಾ ನಡೆಯಿತು.ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ, ಆಸ್ಪತ್ರೆಯ ನೇತ್ರ ತಜ್ಞರಾದ ಡಾ, ಶಿಲ್ಪನಾಯಕ್, ಎಸ್.ಟಿ.ಎಸ್ ಅಧಿಕಾರಿ ಶಿವರಾಜ, ಪಿ.ಹೆಚ್.ಸಿ ಅಧಿಕಾರಿ ಚೈತ್ರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸುದೀರ್ ಬಾಬು. ಕಿರಿಯ ಆರೋಗ್ಯ ಶಿಕ್ಷಣಾಧಿಕಾರಿ ಬಾಬು ಚಿನ್ನು ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ

