ಭ್ರಷ್ಟಾಚಾರ ವಿರೋಧಿ ಜಾಗೃತಿ – ಅರಿವು ಸಪ್ತಾಹ 2025.
ಮಾನ್ವಿ ನ.06

ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ರಾಯಚೂರು ಹಾಗೂ ತಾಲೂಕು ಆಡಳಿತ ಸಂಯುಕ್ತ ಆಶ್ರಯದಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ ಜಾಗೃತಿ ಅರಿವು ಸಪ್ತಾಹ – 2025 ರ ಕಾರ್ಯಕ್ರಮಕ್ಕೆ ಕರ್ನಾಟಕ ಲೋಕಾಯುಕ್ತ ರಾಯಚೂರು ಪೊಲೀಸ್ ಅಧೀಕ್ಷಕರಾದ ಸತೀಶ್.ಎಸ್ ಚಿಟಗುಬ್ಬಿ ಚಾಲನೆ ನೀಡಿ ಮಾತನಾಡಿ ಜಿಲ್ಲೆಯಲ್ಲಿ ನ. 11 ರ ವರೆಗೆ ಭ್ರಷ್ಟಾಚಾರ ವಿರೋಧಿ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಆಧಿಕಾರಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರಿಗೆ ಹಾಗೂ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಯಾವುದೇ ಫಲಾಫೇಕ್ಷೆ ಇಲ್ಲದೆ ಸಕಾಲದಲ್ಲಿ ಮಾಡಿ ಕೊಡಬೇಕು. ಸರ್ಕಾರಿ ಇಲಾಖೆಗಳಲ್ಲಿ ನೌಕರರು ಪ್ರಾಮಾಣಿಕವಾಗಿ, ಶ್ರದ್ಧೆಯಿಂದ ಕಾರ್ಯ ನಿರ್ವಹಿಸಬೇಕು ಸಾರ್ವಜನಿಕರ ಕೇಲಸಗಳನ್ನು ಮಾಡಿ ಕೊಡುವುದಕ್ಕೆ ಫಲಾಪೇಕ್ಷೆ ಅಪೇಕ್ಷಿಸುವುದು, ಅನಗತ್ಯ ವಿಳಂಬ ಮಾಡುವುದು, ಲೋಕಯುಕ್ತ ಕಾಯ್ದೆ ಯಡಿಯಲ್ಲಿ ಅಪರಾಧವಾಗಿದೆ. ಆದ್ದರಿಂದ ಯಾವುದೇ ಇಲಾಖೆಯ ನೌಕರರು ಸಾರ್ವಜನಿಕರಿಗೆ ವಿಳಂಬವಿಲ್ಲದೆ ಉತ್ತಮವಾದ ಸೇವೆಯನ್ನು ನೀಡಬೇಕು ತಪ್ಪಿದಲ್ಲಿ ಈ ಕುರಿತು ಸಾರ್ವಜನಿಕರು ಲೋಕಾಯುಕ್ತ ರಾಯಚೂರಿಗೆ ದೂರನ್ನು ನೀಡಿದಲ್ಲಿ ಅಂತಹ ಅಧಿಕಾರಿಗಳ ಮೇಲೆ ಅಗತ್ಯ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಹಸೀಲ್ದಾರ್ ಭೀಮರಾಯ.ಬಿ ರಾಮಸಮುದ್ರ ಮಾತನಾಡಿ ತಾಲೂಕಿನ ಎಲ್ಲಾ ಸರ್ಕಾರಿ ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರಿಂದ ಸಕಾಲ ಅಡಿಯಲ್ಲಿ ಅರ್ಜಿಗಳನ್ನು ಸ್ವೀಕರಿಸಿ ಕಾಲ ಮಿತಿಯೊಳಗೆ ವಿಲೇವರಿ ಮಾಡಬೇಕು ಕಂದಾಯ ಇಲಾಖೆಯಡಿಯಲ್ಲಿ ಬರುವ ಎಲ್ಲಾ ಸೇವೆಗಳ್ನು ಸಾರ್ವಜನಿಕರಿಗೆ ಶೀರ್ಘವೇ ಕಾಲ ಮೀತಿಯೊಳಗೆ ನೀಡುವ ಮೂಲಕ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಕೊಂಡಿದ್ದೇವೆ ಎಂದು ತಿಳಿಸಿದರು. ಕರ್ನಾಟಕ ಲೋಕಾಯುಕ್ತ ರಾಯಚೂರು ಪೊಲೀಸ್ ಉಪಾಧೀಕ್ಷಕರಾದ ರವಿ ಪುರುಷೋತ್ತಮ ಅಧಿಕಾರಿಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ರಾಯಚೂರು ಪೊಲೀಸ್ ನಿರೀಕ್ಷಕರಾದ ಕಾಳಪ್ಪ ಬಡಿಗೇರ ತಾ.ಪಂ ಇ.ಓ ಖಾಲೀದ್ ಅಹಮ್ಮದ್ ಗ್ರೇಡ್-2 ತಹಸೀಲ್ದಾರ್ À ಅಬ್ದುಲ್ ವಾಹಿದ್, ತಾ.ಆರೋಗ್ಯಾಧಿಕಾರಿ ಡಾ, ಶರಣಬಸವರಾಜ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ.ಡಿ, ಪುರಸಭೆ ಮುಖ್ಯಾಧಿಕಾರಿ ಪರಶುರಾಮ ದೇವಮಾನೆ. ಸೇರಿದಂತೆ ತಾಲೂಕಿನ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದರು.
ಬಾಕ್ಸ್ ನ್ಯೂಸ್:-
ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ರಾಯಚೂರು ಪೊಲೀಸ್ ಅಧೀಕ್ಷಕರಾದ ಸತೀಶ್.ಎಸ್ ಚಿಟಗುಬ್ಬಿ ಮಾತನಾಡಿದರು.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ

