ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ – ಪ್ರಭುರಾಜ ಕೊಡ್ಲಿ ಆರೋಪ.
ಮಾನ್ವಿ ನ.12

ತಾಲೂಕಿಗೆ ಸೇರಿದಂತೆ ರಾಯಚೂರು ಜಿಲ್ಲೆಯಾದ್ಯಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ವಸತಿ ನಿಲಯಗಳಿಗೆ ಕಳೆದ 4 ತಿಂಗಳಿಂದ ಗುತ್ತಿಗೆ ಪಡೆ ಶಿರಿಡಿ ಸಾಯಿ ಪ್ರಾವಿಜನ್ ಸ್ಟೋರ್ ಆಹಾರ ಸರಬರಾಜು ಮಾಡಿಲ್ಲದ ಕಾರಣ ಸರಕಾರ ಕೂಡಲೇ ಕ್ರಮ ಜರುಗಿಸಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಪ್ರಭುರಾಜ್ ಕೊಡ್ಲಿ ಒತ್ತಾಯಿಸಿದರು.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಲಿತ ಮತ್ತು ದಲಿತ ಮಕ್ಕಳಿಗೆ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡದೇ ಮಲತಾಯಿ ಧೋರಣೆ ಅನುಸರಿಸುತ್ತಿರುವ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡೆಯನ್ನು ಖಂಡಿಸುತ್ತೇವೆ ಎಂದು ಕಿಡಿಕಾರಿದರು.
ಭೂಮಿ ನಿವೇಶನ ಇಲ್ಲದ ಪರಿಶಿಷ್ಟ ಜಾತಿ ಬಡ ಕುಟುಂಬಗಳ ಬಗ್ಗೆ ಕಾಳಜಿ ಇಲ್ಲದ ಹಾಗೂ ಸುಮಾರು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿರುವ ವಸತಿ ನಿಲಯಗಳು, ಅಂಬೇಡ್ಕರ್ ಭವನ ಹಾಗೂ ಬಾಬು ಜಗಜೀವನರಾಮ್ ಭವನ ನಿರ್ಮಾಣ ಮಾಡದೇ ನಿರ್ಲಕ್ಷ್ಯವಹಿಸುತ್ತಿರುವುದು ನಮ್ಮ ಸಂಘಟನೆ ಖಂಡಿಸುತ್ತದೆ ಎಂದರು.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

