ನ.14 ರಂದು ಮಕ್ಕಳ ದಿನಾಚರಣೆಯ ಪ್ರಯುಕ್ತ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ – ಪೋಷಕರ ಹಾಗೂ ಹಾಗೂ ಶಿಕ್ಷಕರ ಮಹಾ ಸಭೆ ಆಯೋಜನೆ.
ಯಲಗೋಡ ನ.13

ಶಾಲೆಯು ಸಮುದಾಯದ ಒಂದು ಭಾಗವಾಗಿದ್ದು ಭಾಗೀದಾರರು ಹಾಗೂ ಪೋಷಕರು ವಿಶ್ವಾಸ ಹಾಗೂ ಸಹಕಾರವು ಸರಕಾರಿ ಶಾಲೆಗಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯತ್ತದೆ ಅರ್ಹ ವಯೋಮಾನದ ಎಲ್ಲಾ ಮಕ್ಕಳು ಶಾಲೆಗೆ ದಾಖಲಾಗಿ ನಿರಂತರವಾಗಿ ಹಾಜರಾಗಿ ಗುಣಮಟ್ಟದ ಶಿಕ್ಷಣ ಪಡೆಯುವು ಅವಶ್ಯವಾಗಿರುತ್ತದೆ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಮುಖ್ಯವಾಗಿದೆ ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ನವೆಂಬರ್ 14 ರಂದು ಮಕ್ಕಳ ದಿನಾಚರಣೆಯ ಪ್ರಯುಕ್ತ ಎಲಾ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಪೋಷಕರ ಹಾಗೂ ಶಿಕ್ಷಕರ ಮಹಾ ಸಭೆಯನ್ನು ಆಯೋಜಿಸಲಾಗಿದೆ. ದೇವರ ತಾಲ್ಲೂಕಿನ ಯಲಗೋಡ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್14 ರಂದು ಮಕ್ಕಳ ದಿನಾಚರಣೆ ಪ್ರಯುಕ್ತವಾಗಿ ಪೋಷಕರ ಹಾಗೂ ಶಿಕ್ಷಕರ ಮಹಾ ಸಭೆ ಕರೆಯಲಾಗುತ್ತದೆ ಹಾಗೂ ಎಲ್ಲಾ ಪೋಷಕರ ತಪ್ಪದೆ ಈ ಸಭೆಗೆ ಬರಬೇಕು ಎಂದು ಶಾಲೆಯ ಮುಖ್ಯ ಗುರುಗಳಾದ ಮಲ್ಲಿಕಾರ್ಜುನ ದೊಡ್ಡಮನಿಯವರು ತಿಳಿಸಿದ್ದಾರೆ.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಭೀಮಪ್ಪ ಹಚ್ಯಾಳ ದೇವರ ಹಿಪ್ಪರಗಿ

