ತಾಲೂಕಿನ ಬ್ಯಾಗವಾಟ್ ಗ್ರಾಮ ಪಂಚಾಯತಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗೆ – ತಿಂಗಳ ಉತ್ತಮ ಅಭಿವೃದ್ದಿ ಅಧಿಕಾರಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಮಾನ್ವಿ ನ.14

ರಾಯಚೂರಿನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲೂಕಿನ ಬ್ಯಾಗವಾಟ್ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳಾದ ಎನ್.ಶಿವಕುಮಾರ್ ಅವರಿಗೆ ಅಕ್ಟೋಬರ್ ತಿಂಗಳ ಉತ್ತಮ ಗ್ರಾಪಂ ಅಭಿವೃದ್ಧಿ ಅಧಿಕಾರಿ ಪ್ರಶಸ್ತಿಯನ್ನು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕಾಂದೂ ರವರು ಪ್ರಧಾನ ಮಾಡಿದರು.ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾದಡಿ ಮಾನವ ದಿನಗಳ ಸೃಜನ ತೆರಿಗೆ ವಸೂಲಾತಿ, ಸ್ವಚ್ಛ ಭಾರತ್ ಮಿಷನ್ ನಡಿ ಶೌಚಾಲಯ ನಿರ್ಮಾಣ, ಸ್ವ ಸಹಾಯ ಒಕ್ಕೂಟಗಳಿಗೆ ಪ್ರೋತ್ಸಾಹ ಸೇರಿ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಪ್ರಗತಿ ಸಾಧಿಸಿದ್ದಕ್ಕೆ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು ಈ ವೇಳೆ ಜಿ.ಪಂ ಉಪ ಕಾರ್ಯದರ್ಶಿಗಳಾದ ಹಾಲಸಿದ್ದಪ್ಪ ಪೂಜಾರಿ, ಯೋಜನಾ ನಿರ್ದೇಶಕರಾದ ಶರಣ ಬಸವರಾಜ, ಮಾನ್ವಿ ತಾ,ಪಂ ಇ.ಓ ಪುರುರಾಜ್ ಸಿಂಗ್ ಸೋಲಂಕಿ ಐಎಎಸ್ ತಾ.ಪಂ ಸಹಾಯಕ ನಿರ್ದೇಶಕರಾದ ಖಾಲೀದ್ ಅಹ್ಮದ್ ಸೇರಿದಂತೆ ತಾಲೂಕಿನ ಪಿ.ಡಿ.ಓ ಗಳು ಸಿಬ್ಬಂದಿಗಳು ಇದ್ದರು.
ಬಾಕ್ಸ್ ನ್ಯೂಸ್:-
ಮಾನ್ವಿ ರಾಯಚೂರಿನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ತಾಲೂಕಿನ ಬ್ಯಾಗವಾಟ್ ಗ್ರಾಮ ಪಂಚಾಯತಿ ಪಿ.ಡಿ.ಓ ಎನ್.ಶಿವಕುಮಾರ್ ರವರಿಗೆ ತಿಂಗಳ ಉತ್ತಮ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ
