ಮಾಜಿ ಸಂಸದ ಬಿ.ವಿ ನಾಯಕ ಅವರ 58 ನೇ. ಹುಟ್ಟು ಹಬ್ಬ ಸರಳ ಆಚರಣೆ.
ಮಾನ್ವಿ ನ.14

ರಾಯಚೂರು ಲೋಕ ಸಭೆಯ ಜನಪ್ರಿಯ ಮಾಜಿ ಸಂಸದ ಬಿ.ವಿ ನಾಯಕ ಅವರ 58 ನೇ. ಹುಟ್ಟು ಹಬ್ಬವನ್ನು ಭಾರತೀಯ ಜನತಾ ಪಾರ್ಟಿ ಮಾನ್ವಿ ಮಂಡಲ ಹಾಗೂ ಅಭಿಮಾನಿ ಬಳಗದ ವತಿಯಿಂದ ಅತ್ಯಂತ ಸರಳ ಹಾಗೂ ಅರ್ಥ ಪೂರ್ಣವಾಗಿ ಆಚರಿಸಲಾಯಿತು.ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದ ಸದಸ್ಯರು ಮತ್ತು ಬಿಜೆಪಿ ಮುಖಂಡರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ನೆರಳು ಅನಾಥ ಆಶ್ರಮ, ಅಂದ ಮಕ್ಕಳ ಶಾಲೆ ಹಾಗೂ ತಾಲೂಕಾ ತಾಯಿ ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ರೋಗಿಗಳಿಗೆ ಮತ್ತು ಮಕ್ಕಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು. ಅಲ್ಲದೇ, ಅದಾಪುರ ಪೇಟೆ ಮತ್ತು ಬ್ರಾಹ್ಮಣ ವಾಡಿ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಮತ್ತು ಪೆನ್ನುಗಳನ್ನು ವಿತರಿಸುವ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲಾಯಿತು.ನಾಯಕರ ಹುಟ್ಟು ಹಬ್ಬದ ಅಂಗವಾಗಿ ಸೇವಾ ಕಾರ್ಯಗಳು ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಮಾನ್ವಿ ಮಂಡಲದ ಪ್ರಧಾನ ಕಾರ್ಯದರ್ಶಿ ಗುರುಸಿದ್ದಪ್ಪ ಕಣ್ಣೂರು ಅವರು “ನಮ್ಮ ನಾಯಕರ ಹುಟ್ಟು ಹಬ್ಬದ ಅಂಗವಾಗಿ ಈ ದಿನ ಭಾರತೀಯ ಜನತಾ ಪಾರ್ಟಿ ಮಾನ್ವಿ ಮಂಡಲ ಹಾಗೂ ಅಭಿಮಾನಿ ಬಳಗದ ವತಿಯಿಂದ ನಾನಾ ಸೇವಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ನೆರಳು ಅನಾಥ ಆಶ್ರಮ, ಅಂದ ಮಕ್ಕಳ ಶಾಲೆ ಮತ್ತು ತಾಯಿ ಮಕ್ಕಳ ಆಸ್ಪತ್ರೆಗಳಿಗೆ ಭೇಟಿ ನೀಡಿ ಹಣ್ಣುಗಳನ್ನು ವಿತರಿಸಿದ್ದೇವೆ. ಸರಳತೆಯಿಂದ ಅವರ ಹುಟ್ಟು ಹಬ್ಬವನ್ನು ಆಚರಿಸಿದ್ದೇವೆ.”ಮುಖಂಡರಾದ ಅರುಣ್ ಚಂದ ಅವರು ಮಾತನಾಡಿ “ಬಿ.ವಿ ನಾಯಕ ಅವರ ಆದರ್ಶಗಳನ್ನು ಪಾಲಿಸುವ ನಿಟ್ಟಿನಲ್ಲಿ ಈ ದಿನ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಹಾಗೂ ಪೆನ್ನುಗಳನ್ನು ವಿತರಿಸುವ ಮೂಲಕ ಸಮಾಜಕ್ಕೆ ಸಣ್ಣ ಕೊಡುಗೆ ನೀಡುವ ಪ್ರಯತ್ನ ಮಾಡಲಾಗಿದೆ. ನಮ್ಮ ನಾಯಕರ ಈ ಹುಟ್ಟು ಹಬ್ಬವು ಎಲ್ಲರಿಗೂ ಸ್ಫೂರ್ತಿಯಾಗಲಿ.”ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಎಲ್ಲಾ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಹಾಗೂ ಬಿ.ವಿ ನಾಯಕ್ ಅವರ ಹಲವಾರು ಅಭಿಮಾನಿಗಳು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

