ವೈಯಕ್ತಿಕ ವಿಭಾಗದಲ್ಲಿ 100 ಮೀ ಓಟದಲ್ಲಿ ದ್ವೀತಿಯ ಸ್ಥಾನ ಪಡೆದು – ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಕುಮಾರಿ ಸವಿತಾ ಟಕ್ಕಳಕಿ.
ಬಸರಕೋಡ ನ.15

ಮುದ್ದೇಬಿಹಾಳ ತಾಲ್ಲೂಕಿನ ಬಸರಕೋಡ ಗ್ರಾಮದ ಶ್ರೀ ಪವಾಡ ಬಸವೇಶ್ವರ ಸಂಸ್ಥೆಯ ಅಡಿಯಲ್ಲಿ ನಡೆಯುವ ಮಾತೋಶ್ರೀ ಶಿವಲಿಂಗಮ್ಮ.ಬ ನಾಡಗೌಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿಧ್ಯಾರ್ಥಿನಿ ಕುಮಾರಿ ಸವಿತಾ ಟಕ್ಕಳಕಿ ದಿನಾಂಕ 12-11-2025 ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಗಳಲ್ಲಿ ವೈಯಕ್ತಿಕ ವಿಭಾಗದ 100 ಮೀ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ. ಈ ವಿದ್ಯಾರ್ಥಿನಿಗೆ ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಶಾಲೆಯ ಮುಖ್ಯ ಗುರುಗಳು ಹಾಗೂ ಸಿಬ್ಬಂದಿ ವರ್ಗ, ಊರಿನ ಗುರು ಹಿರಿಯರು, ಕ್ರಿಡಾ ಪ್ರೆಮಿಗಳು, ಹಳೆಯ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಬಸವರಾಜ ಸಂಕನಾಳ ಮುದ್ದೇಬಿಹಾಳ

