ಮಕ್ಕಳ ಪ್ರತಿಭೆ ಅನಾವರಣವಾಗಲಿ, ಉನ್ನತ ಸ್ಥಾನ ಮಾನ ಪಡೆಯಲಿ – ತರೀಕೆರೆ ಎನ್ ವೆಂಕಟೇಶ್.
ತರೀಕೆರೆ ನ.15

ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಸರ್ಕಾರ 2002 ರಲ್ಲಿ ಪ್ರತಿಭಾ ಕಾರಂಜಿ ಎಂಬ ಕಾರ್ಯಕ್ರಮವನ್ನು ಜಾರಿಗೆ ತಂದಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ತರೀಕೆರೆ.ಎನ್ ವೆಂಕಟೇಶ್ ಹೇಳಿದರು. ಅವರು ಇಂದು ನಂದಿಬಟ್ಟಲು ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಏರ್ಪಡಿಸಿದ್ದ ಲಿಂಗದಹಳ್ಳಿ ವಲಯ ಮಟ್ಟದ ಪ್ರೌಢಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಮಕ್ಕಳ ಪ್ರತಿಭೆ ಅನಾವರಣವಾಗಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಅವಶ್ಯಕವಾಗಿದೆ ಇದರ ಜೊತೆಗೆ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಾಗಿ ಉನ್ನತ ಸ್ಥಾನಮಾನ ಪಡೆದು ತಂದೆ ತಾಯಿ ಓದಿದ ಶಾಲೆ ಊರು ನಾಡಿಗೆ ಒಳ್ಳೆಯ ಕೀರ್ತಿ ತರಬೇಕು ಎಂದು ಹೇಳಿದರು.

ವಸತಿ ಶಾಲೆಯ ಪ್ರಾಂಶುಪಾಲರಾದ ಬಸವರಾಜ ತೆಗ್ಗಿ ಮಾತನಾಡಿ ಮಕ್ಕಳ ಪ್ರತಿಭಾ ವಂತರಾಗಲು ಗುರುವಿನ ಪಾತ್ರ ತುಂಬಾ ಪ್ರಾಮುಖ್ಯವಾದದ್ದು ಎಂದು ಹೇಳಿದರು. ದೈಹಿಕ ಶಿಕ್ಷಕರ ಸಂಘದ ತಿಮ್ಮಪ್ಪ ಮಾತನಾಡಿ ಮೊಬೈಲ್ ನಿಂದ ಗ್ರಾಮೀಣ ಜಾನಪದ ಕಲೆಗಳು ಗೀತೆಗಳು ಭಾವಗೀತೆಗಳು ಮರೆಯಾಗುತ್ತಿದೆ ಮಕ್ಕಳು ಮೊಬೈಲ್ ನಿಂದ ದೂರ ಇರಬೇಕು ಎಂದು ಹೇಳಿದರು. ಜಿಲ್ಲಾ ದೈಹಿಕ ಶಿಕ್ಷಕರಾದ ಕುಮಾರಪ್ಪ ಮತ್ತು ಮೋಹನ್ ರಾಜ್, ಚಂದ್ರಶೇಖರ್, ಹೇಮಾವತಿ, ಆಶಾ ರಾಣಿ ಮಾತನಾಡಿದರು ಜಯದೇವಪ್ಪ ಪ್ರಾಸ್ತಾವಿಕ ನುಡಿ ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷತೆಯನ್ನು ವಹಿಸಿದ್ದ ನಂದಿಬಟ್ಟಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೃಷ್ಣ ನಾಯಕ್ ಮಕ್ಕಳಿಗೆ ಶುಭ ಕೋರಿದರು ಇದೇ ಸಂದರ್ಭದಲ್ಲಿ ಗಣ್ಯರನ್ನು ಸನ್ಮಾನಿಸಲಾಯಿತು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಎನ್.ವೆಂಕಟೇಶ್. ತರೀಕೆರೆ ಚಿಕ್ಕಮಗಳೂರು

