ಕನಕ ಶಾಲೆಯಲ್ಲಿ ಚಾಚಾ ನೆಹರು ಹಾಗೂ – ಮಕ್ಕಳ ದಿನಾಚರಣೆ ಸಂಭ್ರಮ.

ತಾಯಕನಹಳ್ಳಿ ನ.16

ಕೂಡ್ಲಿಗಿ ತಾಲೂಕಿನ ತಾಯಕನಹಳ್ಳಿ ಗ್ರಾಮದ ಶ್ರೀ ಗುರು ಕನಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾಜಿ ಪ್ರಧಾನಿ ದಿ. ಜವಾಹರ್‌ಲಾಲ್ ನೆಹರೂ ಜನ್ಮ ದಿನಾಚರಣೆ ಅಂಗವಾಗಿ ಶುಕ್ರವಾರ ಮಕ್ಕಳ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ಚಾಚಾ ನೆಹರು ರವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಕಾರ್ಯದರ್ಶಿ ಬಿ.ಟಿ ಮಂಜಣ್ಣ ಮಾತನಾಡಿ ಭಾರತದಲ್ಲಿ ಪ್ರತಿ ವರ್ಷ ನವೆಂಬರ್ 14 ರಂದು ಆಚರಿಸಲಾಗುವ ಮಕ್ಕಳ ದಿನಾಚರಣೆಗೆ ವಿಶೇಷ ಮಹತ್ವವಿದೆ. ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನವನ್ನೇ ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಮಕ್ಕಳು ಮೊದಲ ಪ್ರಧಾನಿಗೆ ಪ್ರೀತಿಯಿಂದ ‘ಚಾಚಾ ನೆಹರು’ ಎಂದು ಕರೆಯಲಾಗುತ್ತಿತ್ತು.

ಮಕ್ಕಳ ಮೇಲಿನ ಅತೀವ ಪ್ರೀತಿ, ಅವರ ಹಕ್ಕುಗಳು ಮತ್ತು ಶಿಕ್ಷಣಕ್ಕಾಗಿ ಅವರ ಅಚಲವಾದ ಸಮರ್ಥನೆಯಿಂದಾಗಿ ಈ ಚಾಚಾ ನೆಹರು ಬಿರುದು ಅವರಿಗೆ ಬಂದೊದಗಿತ್ತು. ಮಕ್ಕಳೆಂದರೆ ನೆಹರೂರವರಿಗೆ ತುಂಬಾ ಪ್ರಿಯವಾಗಿತ್ತು. ಆ ಹಿನ್ನೆಲೆಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಈ ವೇಳೆ ಮುಖ್ಯ ಶಿಕ್ಷಕಿ ಸುನೀತಾ ಗುರುರಾಜ್ ಮಕ್ಕಳ ದಿನಾಚರಣೆಯನ್ನು ಕುರಿತು ಮಾತನಾಡಿದರು. ಮಕ್ಕಳ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆ, ಚಿತ್ರಕಲೆ, ಜನಪದ ಹಾಡು, ಕವನ, ವಚನ ಮುಂತಾದ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ರಾಷ್ಟ್ರೀಯ ನಾಯಕರು, ಸ್ವಾತಂತ್ರ್ಯ ಹೋರಾಟಗಾರರು, ವಚನಕಾರರು ಹಾಗೂ ಕೃಷ್ಣ ರಾಧೆ, ಶಾಕುಂತಲೆ, ಕೊರವಂಜಿ, ಇತರೆ ವೇಷದಲ್ಲಿ ಕಂಗೊಳಿಸುತ್ತಿದ್ದ ಮಕ್ಕಳು ತಮ್ಮ ಪಾತ್ರ ಪರಿಚಯ ಮಾಡಿ ಕೊಂಡರು.

ಈ ಕಾರ್ಯಕ್ರಮದಲ್ಲಿ ಹುಡೇಂ ಗ್ರಾ‌ಪಂ ನಿವೃತ್ತ ಗ್ರಂಥ ಪಾಲಕ ತುಡುಮ ಗುರುರಾಜ, ಶಾಲಾ ಶಿಕ್ಷಕರಾದ ಹಂಪಮ್ಮ ಪೂಜಾರ್, ಮಂಜುಳಾ ಎಂ, ಸುಮಿತ್ರ ಸಿ.ಆರ್, ರುದ್ರಮ್ಮ ಸಿ, ಕರಿಬಸಮ್ಮ ಎಚ್.ಆರ್, ಮಮತಾ ಜೆ.ಎಸ್, ಬಸವರಾಜ್ ಜಿ.ಪಿ ಹಾಗೂ ಬೋಧಕ್ಕೆತರ ಸಿಬ್ಬಂದಿ ಮಲ್ಲಿಕಾರ್ಜುನ, ಶಾಂತಕುಮಾರ, ವನಜಾಕ್ಷಮ್ಮ ಭಾಗವಹಿಸಿದ್ದರು.

ಹೋಬಳಿ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್ ವೀರೇಶ್ ಕೆ ಹೊಸಹಳ್ಳಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button