ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾಗಿದೆ – ಸಿದ್ದನಗೌಡ ಪಾಟೀಲ್.
ಮಾನ್ವಿ ನ.16

ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾಗಿದ್ದು ಈ ಸಮಯವನ್ನು ವ್ಯರ್ಥ ಮಾಡಿ ಕೊಳ್ಳದೆ ಉಪನ್ಯಾಸಕರು ನೀಡಿದ ಮಾರ್ಗದರ್ಶನವನ್ನು ಪಡೆದು ಕೊಂಡು ತಮ್ಮ ಮುಂದಿನ ಜೀವನವನ್ನು ಹಾಗೂ ಭವಿಷ್ಯವನ್ನು ಚೆನ್ನಾಗಿ ರೂಪಿಸಿ ಕೊಳ್ಳಿ ಎಂದು ಕಲ್ಮಠ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಸಿದ್ದನಗೌಡ ಪಾಟೀಲ್ ತಿಳಿಸಿದರು. ಪಟ್ಟಣದ ಹಠಯೋಗಿ ಅವಧೂತ ಅನ್ನಮಯ್ಯತಾತ ದೇವಸ್ಥಾನದ ಆವರಣದಲ್ಲಿ ಕಲ್ಮಠ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಯೋಜನೆ ಘಟಕದ ವತಿಯಿಂದ ಹಮ್ಮಿಕೊಂಡ ಪರಿಸರ ವಿಕ್ಷೇಣೆ ಕಾರ್ಯಕ್ರಮದಲ್ಲಿ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಪ್ರತಿನಿತ್ಯ ಹೊಸ ಹೊಸ ವಿಷಯಗಳ ಬಗ್ಗೆ ತಿಳಿದು ಕೊಳ್ಳುವುದಕ್ಕೆ ಪ್ರಯತ್ನಿಸಿದಾಗ ಮಾತ್ರ ಉತ್ತಮವಾದ ಜ್ಞಾನವನ್ನು ಪಡೆದು ಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ ಎಂದು ತಿಳಿಸಿದರು.ಕಾಲೇಜಿನ ಕನ್ನಡ ಉಪನ್ಯಾಸಕರಾದ ದೇವೇಂದ್ರಪ್ಪ ಪುಲದಿನ್ನಿ ಮಾತನಾಡಿದರು.ವಿವಿಧ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ವಿರುಪಣ್ಣ ಪಾಟೀಲ್, ರಾಘವೇಂದ್ರ, ಆನಂದ ,ಹುಸೇನ್, ಶರಣಮ್ಮ, ಲಕ್ಷ್ಮಿ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

