ಪ್ರತಿಭಾ ಕಾರಂಜಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ – ನಂದವಾಡಗಿ ಶಾಲೆಯ ಮಕ್ಕಳು.
ನಂದವಾಡಗಿ ನ.23

ಬಾಗಲಕೋಟೆ ಜಿಲ್ಲೆಯ ಇಲಕಲ್/ಹುನಗುಂದ ತಾಲೂಕಿನ ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ನಡೆದ ೨೦೨೫-೨೬ ನೇ. ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿದ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿ ಶಾಲೆ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆಗೈದಿದ್ದಾರೆ. ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ಹದಿನಾಲ್ಕು ವಿದ್ಯಾರ್ಥಿನಿಯರು ಪ್ರಥಮ ಸ್ಥಾನ , ಮೂವರು ದ್ವಿತೀಯ ಸ್ಥಾನ, ಐವರು ತೃತೀಯ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಶಾಲೆ ಮುಖ್ಯ ಗುರುಮಾತೆ ವಿ ಬಿ ಕುಂಬಾರ ಮೇಡಂ ತಿಳಿಸಿದರು. ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಅಮೋಘ ಸಾಧನೆಗೈದ ಎಲ್ಲಾ ವಿದ್ಯಾರ್ಥಿನಿಯರಿಗೆ ಎಸ್ ಡಿ ಎಂ ಸಿ ಅಧ್ಯಕ್ಷರು, ಸದಸ್ಯರು, ಪಾಲಕರು, ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ. ಶಾಲೆಯ ಶಿಕ್ಷಕಿಯರಾದ ಜಿ ಆರ್ ನದಾಫ್ ಮೇಡಂ, ಜ್ಯೋತಿ ಮೇಡಂ, ಎಸ್ ಬಿ ಮಲಗಿಹಾಳ ಮೇಡಂ, ಬಸವರಾಜ ಬಲಕುಂದಿ, ಡಾ. ವಿಶ್ವನಾಥ ತೋಟಿ, ಚಂದ್ರಶೇಖರ ಹುತಗಣ್ಣ, ಕು. ಅಶ್ವಿನಿ ಕಪ್ಪರದ ಹಾಗೂ ಶಾಲಾ ಮಂತ್ರಿ ಮಂಡಲ, ವಿದ್ಯಾರ್ಥಿನಿಯರು ಅಭಿನಂದನೆ ಸಲ್ಲಿಸಿ, ಶುಭ ಕೋರಿದ್ದಾರೆ.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರತಾಪ್.ವಾಯ್.ಕಿಳ್ಳಿ.ಇಲಕಲ್ಲ

