ಭರತ ನಾಟ್ಯ ಉಚಿತ ತರಬೇತಿಗೆ – ಅದಿತಿ ಫೌಂಡೇಶನ್ ಚಾಲನೆ.
ಮಾನ್ವಿ ನ.25

ಪಟ್ಟಣದ ರಾಘವೇಂದ್ರ ಸ್ವಾಮಿ ಮಠದ ಸಭಾಂಗಣದಲ್ಲಿ ಸರ್ಕಾರಿ ಶಾಲೆಯ ಆಯ್ದ ಆಸಕ್ತ ವಿದ್ಯಾರ್ಥಿಗಳಿಗೆ ಒಂದು ವರ್ಷದ ಉಚಿತ ಭರತ ನಾಟ್ಯ ತರಬೇತಿ ಕಾರ್ಯಕ್ರಮಕ್ಕೆ ಅದಿತಿ ಫೌಂಡೇಶನ್ ವತಿಯಿಂದ ಚಾಲನೆ ನೀಡಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅದಿತಿ ಫೌಂಡೇಶನ್ ಮುಖ್ಯಸ್ಥೆ ಅಂಬಿಕಾ ಮಧುಸೂದನ್ ಅವರು, “ಸರ್ಕಾರಿ ಶಾಲೆ ಉಳಿಸಿ–ಬೆಳೆಸಿ” ಅಭಿಯಾನದ ಅಂಗವಾಗಿ ನಾಡಿನ ಕಲೆ–ಸಂಸ್ಕೃತಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
“ಸರ್ಕಾರಿ ಶಾಲೆಗಳ ಮಕ್ಕಳಿಗೆ ಕಲಾ ಶಿಕ್ಷಣದ ಅವಕಾಶ ಕಲ್ಪಿಸಲು ನಮ್ಮ ಸಂಸ್ಥೆ ಆರ್ಥಿಕ ನೆರವು ನೀಡುತ್ತಿದ್ದು, ಪ್ರತಿಭಾವಂತರನ್ನು ಉತ್ತೇಜಿಸುವುದು ನಮ್ಮ ಉದ್ದೇಶ,” ಎಂದು ತಿಳಿಸಿದರು.
ಶಾಸ್ತ್ರಿ ಮಾರ್ಗದರ್ಶನದಲ್ಲಿ ಭರತನಾಟ್ಯ ಗುರು ಗುರುರಾಜ ಅವರ ನೇತೃತ್ವದಲ್ಲಿ ತರಗತಿಗಳನ್ನು ಅಧಿಕೃತವಾಗಿ ಆರಂಭಿಸಲಾಯಿತು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಚಂದ್ರಶೇಖರ ಹೂಗಾರ, ಶಿಕ್ಷಕರಾದ ಸಂಗಮೇಶ ಮುಧೋಳ, ಅಶ್ವಿನಿ ಸಂಗಮೇಶ, ಹಾಗೂ ಪೋಷಕರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

