ಶಾರದಾ ವಿದ್ಯಾನಿಕೇತನ ಶಾಲಾ ಬಸ್–ಲಾರಿ ನಡುವೆ ಅಪಘಾತ.
ಮಾನ್ವಿ ನ.26

ಪಟ್ಟಣದ ಶಾರದಾ ವಿದ್ಯಾನಿಕೇತನ ಶಾಲೆಯ ಮಕ್ಕಳನ್ನು ಕೊಟ್ನೆಕಲ್ ಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಶಾಲಾ ಬಸ್ ಹಾಗೂ ಈಚರ್ ಲಾರಿ ನಡುವೆ ನಡೆದ ಅಪಘಾತದಲ್ಲಿ ಒಬ್ಬ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದ್ದು, ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟು ಗಾಯಗಳಾಗಿವೆ.
ಅಪಘಾತದಲ್ಲಿ ಗಾಯಗೊಂಡ 4ನೇ. ತರಗತಿಯ ವಿದ್ಯಾರ್ಥಿನಿ ಸನ್ನಿಧಿ ಗಂಭೀರ ಗಾಯ ಗೊಂಡಿದ್ದು, ತಕ್ಷಣ ಮಾನ್ವಿ ಪಟ್ಟಣದ ಲಕ್ಷ್ಮಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ವಿದ್ಯಾರ್ಥಿಗಳಿಗೂ ಅಗತ್ಯ ವೈದ್ಯಕೀಯ ನೆರವು ಒದಗಿಸಲಾಗಿದೆ. ಅಪಘಾತದ ನಿಖರ ಕಾರಣ ತಿಳಿದು ಬಾರದಿದ್ದರೂ, ಸ್ಥಳೀಯರು ಅತಿ ವೇಗ ಹಾಗೂ ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿರುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ.
ಘಟನೆಯ ನಂತರ ತಹಸಿಲ್ದಾರ್ ಭೀಮರಾಯ ರಾಮಸಮುದ್ರ ಹಾಗೂ ವೈದ್ಯಾಧಿಕಾರಿಯಾದ ಡಾ, ಶರಣಪ್ಪ ಆಸ್ಪತ್ರೆಗೆ ಭೇಟಿ ನೀಡಿ ಗಾಯ ಗೊಂಡ ಮಕ್ಕಳ ಆರೋಗ್ಯ ಸ್ಥಿತಿ ವಿಚಾರಿಸಿದರು. ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಆಸ್ಪತ್ರೆಗೆ ಸೂಚನೆ ನೀಡಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

