ಅಲ್ಪಸಂಖ್ಯಾತ ವಿರೋಧಿ ಮತ್ತು ಜನ ವಿರೋಧಿ ಕಾಯ್ದೆಗಳನ್ನು ರದ್ದು ಪಡಿಸಲು ಮತ್ತು 4% ಮುಸ್ಲಿಂ ಮೀಸಲಾತಿಯನ್ನು – ಮರು ಸ್ಥಾಪಿಸಲು ಆಗ್ರಹ.

ಮಾನ್ವಿ ನ.26

ಈ ಮೂಲಕ ಕರ್ನಾಟಕದ ಪ್ರಸ್ತುತ ಸರಕಾರಕ್ಕೆ ಈ ಕೆಳಕಂಡ ಗಂಭೀರ ವಿಷಯಗಳ ಬಗ್ಗೆ ತಕ್ಷಣದ ಗಮನ ಹರಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುತ್ತಿದೆ.

ಕರಾಳ ಮತ್ತು ವಿವಾದಿತ ಕಾಯ್ದೆಗಳ ರದ್ದತಿ:-

ಕಳೆದ ಬಿಜೆಪಿ ಸರಕಾರವು ಜಾರಿಗೆ ತಂದ ಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ, 2021 ಮತ್ತು ಕರ್ನಾಟಕ ಧರ್ಮ ಸ್ವಾತಂತ್ರ ಸಂರಕ್ಷಣಾ ಕಾಯ್ದೆ, 2021 ಅತಿ ವಿವಾದಿತ, ಕೋಮು ಪ್ರಚೋದಿತ ಮತ್ತು ಸಂವಿಧಾನ ವಿರೋಧಿ ಕಾನೂನುಗಳಾಗಿವೆ.

ಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ, 2021:-

ಈ ಕಾಯ್ದೆಯ ಅನುಷ್ಠಾನದಿಂದಾಗಿ ರಾಜ್ಯದಲ್ಲಿ ಭಯದ ವಾತಾವರಣ ಉಂಟಾಗಿದೆ. ಗೋ ಸಾಗಾಣಿಕದಾರರ ಮೇಲೆ ಪೊಲೀಸರಿಂದ ಶೂಟೌಟ್, ಮನೆ-ಮುಗ್ಗಟ್ಟುಗಳ ಜಪ್ತಿ ಮುಂತಾದ ಕಳವಳಕಾರಿ ಘಟನೆಗಳು ನಡೆದಿರುವುದು ಆತಂಕಕಾರಿ ಯಾಗಿದೆ.

ಈ ಕರಾಳ ಕಾನೂನಿನಿಂದಾಗಿ ರೈತರು ತಾವು ಬೆಳೆಸಿದ ಜಾನುವಾರುಗಳನ್ನು ಮಾರಾಟ ಮಾಡಲು ಸಾಧ್ಯವಾಗದೆ, ತಮ್ಮ ನೆಚ್ಚಿನ ಕೃಷಿಯಾದ ಜಾನುವಾರು ಸಾಕಾಣಿಕೆಯನ್ನು ಮುಂದುವರೆಸಲಾಗದೆ ಕಂಗಾಲಾಗಿದ್ದಾರೆ. ಇದು ರೈತ ಸಮುದಾಯಕ್ಕೆ ಅನ್ಯಾಯವನ್ನುಂಟು ಮಾಡಿದೆ.

ಕರ್ನಾಟಕ ಧರ್ಮ ಸ್ವಾತಂತ್ರ ಸಂರಕ್ಷಣಾ ಕಾಯ್ದೆ, 2021 ಮತಾಂತರ ನಿಷೇಧ ಕಾಯ್ದೆ:-

ಈ ಕಾಯ್ದೆಯ ನೆಪವನ್ನು ಇಟ್ಟುಕೊಂಡು ಕೋಮುವಾದಿಗಳು ಅಲ್ಪಸಂಖ್ಯಾತರ ಮೇಲೆ ನಿರಂತರ ದೌರ್ಜನ್ಯ ಎಸಗುತ್ತಿದ್ದಾರೆ.

ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಯಾವುದೇ ಒತ್ತಡವಿಲ್ಲದೆ, ತಮಗೆ ಬೇಕಾದ ಧರ್ಮವನ್ನು ಒಪ್ಪಿ, ಆ ಪ್ರಕಾರ ನಡೆದು ಕೊಂಡು ಹೋಗಲು ಅವಕಾಶ ಕಲ್ಪಿಸಿದೆ. ಆದರೆ ಈ ಕಾನೂನು ಚಾಲ್ತಿಯಲ್ಲಿರುವುದು ಸಂವಿಧಾನ ವಿರೋಧಿಯಾಗಿದೆ ಮತ್ತು ಇದು ಸಂಘ ಪರಿವಾರದ ಕೋಮು ಅಜೆಂಡಾದ ಭಾಗವಾಗಿದೆ.

ಚುನಾವಣೆ ಪ್ರಣಾಳಿಕೆಯ ಆಶ್ವಾಸನೆ 2023ರ ವಿಧಾನ ಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಒಂದು ವರ್ಷದ ಒಳಗೆ ಇಂತಹ ಕರಾಳ ಮತ್ತು ಜನ ವಿರೋಧಿ ಕಾನೂನುಗಳನ್ನು ಹಿಂದಕ್ಕೆ ಪಡೆಯುವ ಬಗ್ಗೆ ಸ್ಪಷ್ಟವಾದ ಆಶ್ವಾಸನೆಯನ್ನು ನೀಡಿತ್ತು. ಆದ್ದರಿಂದ, ಪ್ರಸ್ತುತ ಸರಕಾರವು ತನ್ನ ಭರವಸೆಯನ್ನು ಈಡೇರಿಸುವ ತುರ್ತು ಅವಶ್ಯಕತೆಯಿದೆ.

4% ಮುಸ್ಲಿಂ ಮೀಸಲಾತಿ ಮರುಸ್ಥಾಪನೆಕಳೆದ ಸರಕಾರವು ರದ್ದುಪಡಿಸಿದ 4% ಮುಸ್ಲಿಂ ಮೀಸಲಾತಿಯನ್ನು ತಕ್ಷಣವೇ ಮರುಸ್ಥಾಪಿಸಬೇಕು. ಇದು ಮುಸ್ಲಿಂ ಸಮುದಾಯದ ಸಾಮಾಜಿಕ ನ್ಯಾಯ ಮತ್ತು ಶಿಕ್ಷಣ, ಉದ್ಯೋಗದಲ್ಲಿ ಸಮಾನ ಅವಕಾಶವನ್ನು ಖಾತರಿಪಡಿಸಲು ಅತ್ಯವಶ್ಯಕವಾಗಿದೆ.

ನಮ್ಮ ಬೇಡಿಕೆಗಳು ಆದ್ದರಿಂದ, ಸನ್ಮಾನ್ಯ ಮುಖ್ಯ ಮಂತ್ರಿಗಳಲ್ಲಿ ಈ ಕೆಳಕಂಡ ನಿರ್ಣಯಗಳನ್ನು ಮುಂಬರುವ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಕೈಗೊಳ್ಳುವಂತೆ ವಿನಂತಿಸಿ ಕೊಳ್ಳುತ್ತೇವೆ.

ಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ, 2021 ಅನ್ನು ತಕ್ಷಣವೇ ರದ್ದು ಪಡಿಸ ಬೇಕು.

ಕರ್ನಾಟಕ ಧರ್ಮ ಸ್ವಾತಂತ್ರ ಸಂರಕ್ಷಣಾ ಕಾಯ್ದೆ, 2021 ಅನ್ನು ರದ್ದು ಪಡಿಸ ಬೇಕು.

ರದ್ದು ಪಡಿಸಲಾದ 4% ಮುಸ್ಲಿಂ ಮೀಸಲಾತಿಯನ್ನು ತಕ್ಷಣವೇ ಮರು ಸ್ಥಾಪಿಸ ಬೇಕು.

ತಾವು ಕೂಡಲೇ ಈ ಬೇಡಿಕೆಗಳನ್ನು ಈಡೇರಿಸಿ, ರಾಜ್ಯದಲ್ಲಿ ರೈತರಿಗೆ, ಅಲ್ಪಸಂಖ್ಯಾತರಿಗೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಲ್ಲಿ ನಂಬಿಕೆ ಇಟ್ಟಿರುವ ಎಲ್ಲ ನಾಗರಿಕರಿಗೆ ನ್ಯಾಯ ಒದಗಿಸ ಬೇಕೆಂದು ಕೋರುತ್ತೇವೆ.

ತಾಲೂಕು ಅಧ್ಯಕ್ಷ ಶೇಕ್ ಬಾಬಾ ಹುಸೇನ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ. ಎಂ ಎ ಎಚ್ ಮುಕೀಮ್. ತಾಲೂಕ ಕಾರ್ಯದರ್ಶಿ ನಾಸಿರ್ ಅಲಿ. ಪಾರ್ಟಿಯ ಮುಖಂಡರಾದ. ಮಿರ್ಜಾ ಬಾಬಾ ಬೇಗ. ಶೇಕ್ ಮಹಬೂಬ್. ಅಹಮದ್ ಹುಸೇನ್. ರಬ್ಬಾನಿ ಖುರೇಶಿ. ಮಹಮ್ಮದ್ ಹರುನ್. ಅಬ್ದುಲ್ ಸಮದ್ . ಸಿರಾಜ್ ಪಾಷಾ. ಆಲಮ್ ಸಾಬ್. ಸೈಯದ್ ನಾಸಿರ್ ಉದ್ದಿನ್ ಖಾಜಿ. ರೋಹಿತ್ ಪಾಷಾ. ಉಪಸ್ಥಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button