ಮಾರೆಮ್ಮ ದೇವಿ ಹಾಗೂ ಶ್ರೀ ಆಂಜನೇಯ ಸ್ವಾಮಿಯ ಜಾತ್ರಾ ಮಹೋತ್ಸವಕ್ಕೆ – ಶಾಸಕರಿಂದ ಚಾಲನೆ.
ದದ್ದಲ್ ಡಿ.15

ಮಾನ್ವಿ ತಾಲೂಕಿನ ದದ್ದಲ್ ಗ್ರಾಮದಲ್ಲಿನ ಗ್ರಾಮ ದೇವತೆ ಮಾರೆಮ್ಮ ದೇವಿ ಹಾಗೂ ಶ್ರೀ ಆಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಶಾಸಕ ಹಂಪಯ್ಯ ನಾಯಕ ಹಾಗೂ ರಾಯಚೂರು ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಶ್ರೀ ಮಹಾರ್ಷಿ ವಾಲ್ಮೀಕಿ ನಿಗಮದ ರಾಜ್ಯಧ್ಯಾಕ್ಷರಾದ ಬಸವನಗೌಡ ದದ್ದಲ್ ಚಾಲನೆ ನೀಡಿದರು.

ಶಾಸಕ ಹಂಪಯ್ಯ ನಾಯಕ ಗ್ರಾಮಸ್ಥಾರಿಂದ ಮನವಿ ಸ್ವೀಕರಿಸಿ ಮಾತನಾಡಿ ಗ್ರಾಮದ ಜನರ ಬೇಡಿಕೆಯಂತೆ ಕಾತರಕಿ ಯಿಂದ ದದ್ದಲ್ ಗಡಿಯ ವರೆಗಿನ 2.5 ಕಿಲೋ ಮಿಟರ್ ರಸ್ತೆ ಕಾಮಗಾರಿಯನ್ನು 3 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದ್ದು ಅದಷ್ಟು ಶೀಘ್ರವಾಗಿ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣ ಗೊಳಿಸಿ ಕಾಮಗಾರಿ ಪೂರ್ಣ ಗೊಳಿಸುವಂತೆ ಲೋಕೋಪಯೋಗಿ ಇಲಾಖೆ ಅಭಿಯಂತರರಿಗೆ ಸೂಚಿಸಿದರು ಹಾಗೂ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಗ್ರಾಮದ ಮುಖಂಡರಾದ ಅಯ್ಯನಗೌಡ ನಾಯಕ್, ಮೌನೇಶ್ ನಾಯಕ್, ಗೋವಿಂದ್ ರಾಜ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

