ಕಾಲೇಜು ವಿದ್ಯಾರ್ಥಿಗಳಿಗೆ – ಕಾನೂನು ಅರಿವು.
ಕೊಟ್ಟೂರು ಡಿ.16

ಪಟ್ಟಣದ ಶ್ರೀ ಕೊಟ್ಟೂರೇಶ್ವರ ಮಹಾ ವಿದ್ಯಾಲಯದಲ್ಲಿ ಡಿಸೆಂಬರ್ 16 ಮಂಗಳವಾರ ದಂದು ಸಾಮಾಜಿಕ ವಲಯದಲ್ಲಿ ಕ್ರೈಮ್ ಅನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವನ್ನು ಮೂಡಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಒಂಟಿ ಮಹಿಳೆಯರು ರಸ್ತೆಯಲ್ಲಿ ಹೋಗುವಾಗ ಸರಗಳ್ಳತನ ನಡೆಯುತ್ತದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ದರೋಡೆ ನಡೆಯುತ್ತವೆ ಇಂತಹ ಪ್ರಕರಣಗಳನ್ನು ತಡೆಯಲು ಬಿಟ್ ಪೊಲೀಸರಿಂದ ಅಪರಾಧ ಮಾಸಾಚರಣೆ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಪ್ರಸ್ತುತ ಮೊಬೈಲ್ ಫೋನ್ ಪ್ರಪಂಚ ನಿರ್ಮಾಣವಾಗಿದೆ, ಇದರಿಂದ ಸೈಬರ್ ಅಪರಾಧ ಹೆಚ್ಚಾಗುತ್ತವೆ ಇಲ್ಲಿನ ವಿದ್ಯಾರ್ಥಿಗಳು ಎಚ್ಚರ ವಹಿಸಬೇಕು ಎಂದು ಕೊಟ್ಟೂರು ಪೊಲೀಸ್ ಠಾಣೆ ವತಿಯಿಂದ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಡಾ ಎಂ ರವಿಕುಮಾರ್ ಸಂಪೂರ್ಣವಾಗಿ ಕಾನೂನು ಸುವ್ಯಸ್ಥೆ ಕಾಪಾಡುವಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ತಿಳಿಸಿದರು ಹಾಗೂ ಆರಕ್ಷಕ ಠಾಣೆಯ ಎ ಎಸ್ ಐ ಮಹಾಬಲೇಶ್ವರ ಅವರು ಕೂಡ ವಿದ್ಯಾರ್ಥಿಗಳಿಗೆ ಕ್ರೈಂ ತಡೆಗಟ್ಟುವ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ಎನ್ ಸಿ ಸಿ ಅಧಿಕಾರಿಯಾದ ಬಸವರಾಜ ಬಣಕಾರ ಆರಕ್ಷಕ ಠಾಣೆಯ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರದೀಪ್ ಕುಮಾರ್ ಸಿ ಕೊಟ್ಟೂರು

