ಕುಂದಾಪುರ, ಕಾಂಗ್ರೆಸ್ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ ಅವರ ಮಾತೃಶ್ರೀ – ನಾಗಮ್ಮ ಮಹಾಬಲ ಶೆಟ್ಟಿ ನಿಧನ.

ಉಡುಪಿ ಡಿ.19

ಕುಂದಾಪುರ ವಿಧಾನ ಸಭಾ ಕ್ಷೇತ್ರದ ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಪ್ರಭಾವಿ ನಾಯಕರಾದ ಶ್ರೀ ಮಲ್ಯಾಡಿ ಶಿವರಾಮ ಶೆಟ್ಟಿ ಅವರ ಮಾತೃಶ್ರೀಯವರಾದ ಶ್ರೀಮತಿ ನಾಗಮ್ಮ ಮಹಾಬಲ ಶೆಟ್ಟಿ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.ಮೃತರು ದೀರ್ಘಕಾಲದ ಸಾರ್ಥಕ ಬದುಕನ್ನು ನಡೆಸಿ, ಅಪಾರ ಬಂಧು-ಮಿತ್ರರು ಹಾಗೂ ಅಭಿಮಾನಿ ಬಳಗವನ್ನು ಅಗಲಿದ್ದಾರೆ. ಮಲ್ಯಾಡಿ ಕುಟುಂಬದ ಹಿರಿಯ ಕೊಂಡಿಯಾಗಿದ್ದ ಇವರ ನಿಧನಕ್ಕೆ ಕ್ಷೇತ್ರದ ಗಣ್ಯರು, ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

“ನಮ್ಮ ನೆಚ್ಚಿನ ನಾಯಕರಾದ ಮಲ್ಯಾಡಿ ಶಿವರಾಮ ಶೆಟ್ಟಿ ಅವರ ಮಾತೃವಿಯೋಗದ ಸುದ್ದಿ ಕೇಳಿ ಅತ್ಯಂತ ದುಃಖವಾಗಿದೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಮತ್ತು ಅವರ ಕುಟುಂಬಕ್ಕೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ” ಎಂದು ವಿವಿಧ ಮುಖಂಡರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.ಮೃತರ ಅಂತ್ಯ ಕ್ರಿಯೆಯು ಕುಟುಂಬದ ಸಮ್ಮುಖದಲ್ಲಿ ಮಲ್ಯಾಡಿಯ ಸ್ವಗೃಹದಲ್ಲಿ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ವರದಿ:ಆರತಿ.ಗಿಳಿಯಾರು.ಉಡುಪಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button