ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ಎಲ್ಲರೂ ಸಹಕಾರ – ಅಗತ್ಯ ಸುರೇಶ್ ಗಂಗನಹಳ್ಳಿ.
ದೇವಣಗಾಂವ ಡಿ.22

ಆಲಮೇಲ ತಾಲ್ಲೂಕಿನ ದೇವಣಗಾಂವ ಗ್ರಾಮದ ಸರ್ಕಾರಿ ಕಿರಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ, ಮಕ್ಕಳಿಗೆ ಪಲ್ಸ್ ಪೋಲಿಯೊ ಹನಿ ಹಾಕುವ ಮೂಲಕ ಚಾಲನೆ ನೀಡಿದರು.
ಆಲಮೇಲ ತಾಲ್ಲೂಕಿನ ದೇವಣಗಾಂವ ಗ್ರಾಮದ ಪ್ರಗತಿ ಪರ ಶಿಕ್ಷಣ ಸಂಸ್ಥೆಯ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ಪ್ರಾಚಾರ್ಯರಾದ ಶ್ರೀ. ಸುರೇಶ್ ಶಿವಪ್ಪ ಗಂಗನಳ್ಳಿ ಹಾಗೂ ಸರ್ಕಾರಿ ಕಿರಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ ಹಿರಿಯರಾದ ನಿವೃತ್ತ ಹೊಂದಿರುವ ಶ್ರೀ. ಮತಿ. ಶೋಭಾ ಈ. ಕಲಶೇಟ್ಟಿ ರವರು ಸೇರಿ ಚಾಲನೆ ನೀಡಿ.

ಆರೋಗ್ಯವೇ ಪ್ರಥಮ ಆದ್ಯತೆ ಎಂಬ ತಮ್ಮ ಬದ್ಧತೆಯನ್ನು ಮತ್ತೊಮ್ಮೆ ಸ್ಪಷ್ಟ ಪಡಿಸಿದರು. ಮಕ್ಕಳ ಭವಿಷ್ಯವನ್ನು ಸುರಕ್ಷಿತ ಗೊಳಿಸುವ ರಾಷ್ಟ್ರಮಟ್ಟದ ಅಭಿಯಾನಕ್ಕೆ ಸಂಪೂರ್ಣ ಬೆಂಬಲ ನೀಡುತ್ತಾ, ಪೋಲಿಯೊ ಮುಕ್ತ ಭಾರತ ನಿರ್ಮಾಣದಲ್ಲಿ ಎಲ್ಲರೂ ಸಹಕಾರ ನೀಡಬೇಕೆಂದು ಈ ಸಂದರ್ಭದಲ್ಲಿ ಕರೆ ನೀಡಿದರು.
ಈ ಸಮಯದಲ್ಲಿ ದೇವಣಗಾಂವ ಗ್ರಾಮದ ಸರ್ಕಾರಿ ಕಿರಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು ಶ್ರೀ ಮತಿ ಸುಹಾಸಿನಿ.ಈ ಕಲಶೇಟ್ಟಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಜೊತೆಗಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ರೇವಣಸಿದ್ದಯ್ಯ.ಜಿ ಹೀರೆಮಠ ಆಲಮೇಲ

