ಸ್ವಾಮಿ ಶಿವಾನಂದರು ಮತ್ತು ಸ್ವಾಮಿ – ಪ್ರೇಮಾನಂದರ ಜಯಂತ್ಯುತ್ಸವ.
ಚಳ್ಳಕೆರೆ ಡಿ 23


ತ್ಯಾಗರಾಜನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದಿಂದ ಸದ್ಭಕ್ತರಾದ ಶ್ರೀಮತಿ ನಂಜಮ್ಮ ಕೆಂಚಪ್ಪ ಶಿಕ್ಷಕರ ಸವಿತಾ ನಿವಾಸದಲ್ಲಿ “ಸ್ವಾಮಿ ಶಿವಾನಂದರು ಮತ್ತು ಸ್ವಾಮಿ ಪ್ರೇಮಾನಂದರ” ಜಯಂತ್ಯುತ್ಸವದ ಪ್ರಯುಕ್ತ ಆಯೋಜಿಸಿದ್ದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಎಚ್ ಲಕ್ಷ್ಮೀದೇವಮ್ಮ ಅವರು ಶ್ರೀರಾಮಕೃಷ್ಣರ ಶಿಷ್ಯದ್ವಯರ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.


ಈ ಸತ್ಸಂಗದ ಪ್ರಯುಕ್ತ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಶ್ರೀರಾಮರಕ್ಷಾ ಸ್ತೋತ್ರ ಪಠಣ, ವಿಶೇಷ ಭಜನೆ, ಶ್ರೀರಾಮಕೃಷ್ಣರ ನಾಮಸ್ಮರಣೆ, ಯತೀಶ್ ಎಂ ಸಿದ್ದಾಪುರ ಅವರಿಂದ ಶ್ರೀಶಾರದಾದೇವಿ ಜೀವನಗಂಗಾ ಗ್ರಂಥ ಪಾರಾಯಣ, ದಿವ್ಯತ್ರಯರಿಗೆ ಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ನಡೆಯಿತು.

ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಎಂ ಗೀತಾ ನಾಗರಾಜ್, ರಂಗಮ್ಮ ಗುಂಡಲ,ಸ್ವಾತಿ, ಪ್ರಮೀಳಾ ಜಗದೀಶ್, ಗೀತಾ ಸುಂದರೇಶ್ ದೀಕ್ಷಿತ್, ಸರಸ್ವತಿ ನಾಗರಾಜ್, ಸೌಮ್ಯ ಪ್ರಸಾದ್,ರಾಧಾ, ಎಂ ಲಕ್ಷ್ಮೀದೇವಮ್ಮ , ಸುವರ್ಣಮ್ಮ, ಸರ್ವಮಂಗಳಾ ಶಿವಣ್ಣ ಉಪಸ್ಥಿತರಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

