ವಿಮರ್ಶಾತ್ಮಕ ಚಿಂತನೆ ಜೀವನ ಕೌಶಲ್ಯಗಳನ್ನು ಬೆಳೆಸಲು ಸಾಧ್ಯ – ರಮೇಶ ಗಂಗನಹಳ್ಳಿ.

ಕಡಣಿ ಡಿ.30

ಆಲಮೇಲ ತಾಲೂಕಿನ ಕಡಣಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿ ಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಿಜಯಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಸಿಂದಗಿ ಸಮೂಹ ಸಂಪನ್ಮೂಲ ಕೇಂದ್ರ ಕಡಣಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡಣಿ ಶಾಲೆಯಲ್ಲಿ ದಿನಾಂಕ 30 ಡಿಸೆಂಬರ್ 2025 ರಂದು ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾ ಜ್ಞಾನ ಆಧಾರಿತ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷರಾಗಿ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ಶಿವಯೋಗಿ ಕತ್ತಿ ವಹಿಸಿ ಕೊಂಡರು ಈ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಶ್ರೀ ಬಸಲಿಂಗಪ್ಪ ಕತ್ತಿ ಗ್ರಾಮ ಪಂಚಾಯತ್ ಅಧ್ಯಕ್ಷರು ಕಡಣಿ ಉದ್ಘಾಟಿಸಿದರು.

ಈ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷರ ಪ್ರತಿನಿಧಿ ಶ್ರೀ ಮಲ್ಲಪ್ಪ ವಡಗೇರಿ, ಅಲಮೇಲ ವಲಯದ ಶಿಕ್ಷಣ ಸಂಯೋಜಕರಾದ ಶ್ರೀ ಎಂ ಪಿ ಬಿಸ್ಸೇ, ಕಡಣಿ ಕ್ಲಸ್ಟರ್ನ ಸಿ.ಆರ್.ಪಿ ಯವರಾದ ಶ್ರೀ ಡಿ.ಎಚ್ ಗೋಗಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಅದೇ ರೀತಿಯಾಗಿ ಕಲಿಕಾ ಹಬ್ಬ ಕಾರ್ಯಕ್ರಮಕ್ಕೆಎಲ್ಲಾ ಎಸ್‌.ಡಿ.ಎಂ.ಸಿ ಸದಸ್ಯರು, ಪಾಲಕರು, ಕ್ಲಸ್ಟರ್ ಎಲ್ಲ ಶಾಲೆಗಳ ಮುಖ್ಯೋಪಾಧ್ಯಾಯರು ಶಿಕ್ಷಕರು ತಮ್ಮ ಶಾಲೆಯ ಮಕ್ಕಳೊಂದಿಗೆ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಶ್ರೀ ಆರ್ ಎಸ್ ಗಂಗನಳ್ಳಿ, ಪ್ರಾಚಾರ್ಯರು ಪಿ ಬಿ ಎಚ್ ಎಸ್ ಸ್ಕೂಲ್ ಕಡಣಿ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಕಲಿಕಾ ಹಬ್ಬವು ಕೇವಲ ಶಾಲಾ ಕಾರ್ಯಕ್ರಮವಲ್ಲ ಮಕ್ಕಳಲ್ಲಿ ಕಲಿಕೆಯನ್ನು ಹಬ್ಬದಂತೆ ಆಚರಿಸಲು ಆನಂದಿಸಲು ಸೃಜನಾತ್ಮಕತೆ, ವಿಮರ್ಶಾತ್ಮಕ ಚಿಂತನೆ, ಜೀವನ ಕೌಶಲಗಳನ್ನು ಬೆಳೆಸಲು ಸಂತೋಷದಾಯಕ ಕಲಿಕಾ ವಾತಾವರಣ ನಿರ್ಮಿಸಲು ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಅದೇ ರೀತಿಯಾಗಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಿಕ್ಷಣ ಸಂಯೋಜಕರಾದ ಶ್ರೀ ಎಂ.ಪಿ ಬಿಸ್ಸೆ ಇವರು ಕಲಿಕೆಯು ಕಲಿತಷ್ಟು ಕಲಿಸುವ ಸಾಗರ ಅರಿಯಲು ಅರಿವಿನ ಆಗರ. ಸರ್ಕಾರಿ ಶಾಲೆಗಳಲ್ಲಿ ಕ್ಲಸ್ಟರ್ ಮಟ್ಟದಲ್ಲಿ ಒಂದರಿಂದ ಐದನೇ ತರಗತಿಯ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನದ ಚಟುವಟಿಕೆಗಳ ಬಲವರ್ಧನೆಗೆ ಕಲಿಕಾ ಹಬ್ಬವು ಸಂತೋಷದಾಯಕ ಹಾಗೂ ಅನುಭವಯುಕ್ತ ಕಲಿಕೆಯ ವಾತಾವರಣವನ್ನು ಪ್ರೇರೇಪಿಸುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವಿಶೇಷವಾಗಿ ಮಕ್ಕಳಿಂದ ಆಹಾರಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ತಯಾರಿಸಿಕೊಂಡು ಬಂದು ಆಹಾರ ಮೇಳದಲ್ಲಿ ಸಂತಸ ಸಡಗರದಿಂದ ಪಾಲ್ಗೊಂಡರು.

ಕಲಿಕಾ ಹಬ್ಬ ಕಾರ್ಯಕ್ರಮದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಸ್ಥಳದಲ್ಲಿಯೇ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಒಟ್ಟಿನಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡಣಿ ಶಾಲೆಯಲ್ಲಿ ಆಯೋಜಿಸಿದ ಕಲಿಕಾ ಹಬ್ಬವು ಯಶಸ್ವಿಯಾಗಿ ನೆರವೇರಿತು.

ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಶಿಕ್ಷಕಿ ಕೆ.ಎ ಕಲ್ಲೂರಮಠ ಮೇಡಮ್ ಅವರು ನಿರೂಪಣೆ ಮಾಡಿದರು.ಗಾಲೀಬ ಎಲಗಾರ ಶಿಕ್ಷಕರು ವಂದನಾರ್ಪಣೆ ಮಾಡಿ ಕಾರ್ಯಕ್ರಮವನ್ನು ಬಹಳ ಅಚ್ಚುಕಟ್ಟಾಗಿ ನಡೆಸಿ ಕೊಟ್ಟರು.ಹಾಗೂ ಪಾಲಕರು ಪಾಲ್ಗೊಂಡಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ರೇವಣಸಿದ್ದಯ್ಯ ಜಿ ಆಲಮೇಲ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button