ಸಿದ್ಧೇಶ್ವರ ಶ್ರೀಗಳು ಅಧ್ಯಾತ್ಮದ ಮೇರು ಪರ್ವತ – ಆನಂದ ಹುಣಸಗಿ.
ಇಂಡಿ ಜ.02

ಮನುಕುಲಕ್ಕೆ ಸುಂದರ ಬದುಕಿನ ದಾರಿ ತೋರಿದ ಜಗತ್ತಿನ ಶ್ರೇಷ್ಠ ಸಂತ ಸಿದ್ಧೇಶ್ವರ ಸ್ವಾಮೀಜಿಯವರ ಜೀವನ, ಚಿಂತನೆಗಳು ನಮ್ಮೆಲ್ಲರ ಜೀವನಕ್ಕೆ ಮಾರ್ಗದರ್ಶಿಯಾಗಿವೆ ಎಂದು ಶಿಕ್ಷಣ ಸಂಯೋಜಕ ಆನಂದ ಹುಣಸಗಿ ಹೇಳಿದರು.
ಶುಕ್ರವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ 3ನೇ ಗುರುನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅಧ್ಯಾತ್ಮದ ಮೇರು ಪರ್ವತ, ಸದ್ಗುಣಗಳ ಪ್ರತಿರೂಪವಾಗಿದ್ದ ಸಿದ್ದೇಶ್ವರ ಶ್ರೀಗಳು ಸರಳ ಜೀವನ, ಆಳವಾದ ಆಧ್ಯಾತ್ಮಿಕ ಜ್ಞಾನದೊಂದಿಗೆ ಜಾತಿ, ಮತ, ಪಂಥದ ಭೇದಭಾವವಿಲ್ಲದೆ ಎಲ್ಲರಿಗೂ ತತ್ವಶಾಸ್ತ್ರವನ್ನು ಅರ್ಥವಾಗುವ ಭಾಷೆಯಲ್ಲಿ ಪ್ರವಚನ ನೀಡಿ, ಮಾನವೀಯ ಸಮಾಜ ನಿರ್ಮಾಣಕ್ಕೆ ಆದ್ಯತೆ ನೀಡಿದ್ದರು ಎಂದರು.

ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಸಿದ್ದೇಶ್ವರ ಶ್ರೀಗಳ ಜೀವನವೇ ಎಲ್ಲರಿಗೂ ಪ್ರೇರಣೆ. ಸರಳ ಸಜ್ಜನಿಕೆಯ ಸಾಕಾರ ಮೂರ್ತಿಯಾಗಿದ್ದ ಅವರನ್ನು ಕಂಡಾಗ ಚಿಂತೆ, ಕೋಪ-ತಾಪ, ಮರೆಯಾಗುತ್ತಿದ್ದವು. ಶ್ರೀಗಳ ತೆರೆದಿಟ್ಟ ಜೀವನ ಎಲ್ಲರ ಬದುಕಿಗೆ ದಾರಿದೀಪ. ಜತೆಗೆ ಅಮೂಲ್ಯವಾದ ಪುಸ್ತಕವೂ ಹೌದು ಎಂದು ಹೇಳುತ್ತಾ, ಸಂಕೀರ್ಣ ತಾತ್ವಿಕ ವಿಷಯಗಳನ್ನು ಸಾಮಾನ್ಯರಿಗೆ ಅರ್ಥವಾಗುವಂತೆ ಸರಳವಾಗಿ ವಿವರಿಸುವ ಅಸಾಧಾರಣ ಸಾಮರ್ಥ್ಯ ಹೊಂದಿದ್ದ ಸಿದ್ದೇಶ್ವರ ಶ್ರೀಗಳ ಜೀವನ ಮತ್ತುಸಂದೇಶವು ಜಗತ್ತಿಗೆ ದಾರಿದೀಪವಾಗಿದೆ ಎಂದು ಹೇಳಿದರು.
ಮುಖ್ಯ ಶಿಕ್ಷಕರಾದ ಕೆ ಆಯ್ ಮಕಾನದಾರ, ಅನಿಲ ಪತಂಗಿ, ಶಿಕ್ಷಕರಾದ ಎಸ್ ಎಸ್ ಅರಬ, ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ, ಬೇಗಂ ಮುಲ್ಲಾ, ಕಮಲವ್ವ ದಳವಾಯಿ ಸೇರಿದಂತೆ ಮಕ್ಕಳು ಭಾಗವಹಿಸಿದ್ದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಶಿವಪ್ಪ.ಬಿ ಹರಿಜನ ಇಂಡಿ

